ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ನರೇಂದ್ರ ಮೋದಿ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಹಾಕಿದೆ.
ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು. ಅಷ್ಟೇ ಅಲ್ಲದೇ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ಗೆ ನಿರ್ದೇಶನ ನೀಡಿದೆ.
ಈ ಬಗ್ಗೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಮೆಟ್ರೋ ದರ ಏರಿಕೆಯನ್ನು ತಡೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪೋಸ್ಟ್ ಮಾಡಿರುವ ಸಂಸದ ಪಿ.ಸಿ.ಮೋಹನ್ ಅವರು, ಫೆಬ್ರವರಿ.1ರಂದು ನಿಗದಿಯಾಗಿದ್ದ ಬಿಎಂಆರ್‌ಸಿಎಲ್‌ನ 45% ಮೆಟ್ರೋ ದರ ಹೆಚ್ಚಳದ ಪ್ರಸ್ತಾವನೆಯನ್ನು ತಡೆಹಿಡಿಯಲಾಗಿದೆ. ಈ ಮೂಲಕ ಬೆಂಗಳೂರಿನ ಜನರಿಗೆ ಒಂದು ದೊಡ್ಡ ಗೆಲುವು ಸಿಕ್ಕಿದಂತಾಗಿದೆ ಎಂದು ಬರೆದುಕೊಂಡಿದ್ದಾರೆ.





