ನವದೆಹಲಿ: ಮೈಸೂರಿನ ಅಖಿಲ ಭಾರತೀಯ ವಾಕ್ ಮತ್ತು ಶ್ರವಣ್ ಸಂಸ್ಥೆಗೆ 2024-25ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಐಷ್ ನಿರ್ದೇಶಕಿ ಡಾ.ಪುಷ್ಪಾವತಿ ಅವರು ಪ್ರಶಸ್ತಿಯನ್ನು ಸ್ವೀಕಾರಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಡಿ.3) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಮೈಸೂರಿನ ಅಖಿಲ ಭಾರತೀಯ ವಾಕ್ ಮತ್ತು ಶ್ರವಣ ಸಂಸ್ಥೆಗೆ ಈ ವರ್ಷದ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.
ಕೇಂದ್ರ ಸರ್ಕಾರದಿಂದ ಪ್ರತಿ ವರ್ಷ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅವುಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಸಂಸ್ಥೆ ಹಾಗೂ ವ್ಯಕ್ತಿಗಳಿಗೆ ನೀಡುವ ಪ್ರಶಸ್ತಿಗೆ ಈ ಬಾರಿ ಮೈಸೂರಿನ ಐಷ್ ಸಂಸ್ಥೆ ಭಾಜನವಾಗಿದೆ. ಹೀಗಾಗಿ ರಾಷ್ಟ್ರಪತಿ ಅವರಿಂದ ಅಖಿಲ ಭಾರತೀಯ ವಾಕ್ ಮತ್ತು ಶ್ರವಣ ಸಂಸ್ಥೆಯ ಹಾಲಿ ನಿರ್ದೇಶಕರಾಗಿರುವ ಡಾ.ಪುಷ್ಪಾವತಿ ಅವರು ಪ್ರಶಸ್ತಿಯನ್ನು ಸ್ವೀಕಾರ ಮಾಡಿದ್ದಾರೆ.