ರಾಜ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ” ಎಂದು ತಿಳಿಸಿದರು.

ಇದನ್ನು ಓದಿ: ಚೆಕ್‌ ಬೌನ್ಸ್‌ ಕೇಸ್ : ಶಾಲಾ ಕಾರ್ಯದರ್ಶಿಗೆ ಕೊಲೆ ಬೆದರಿಕೆ :‌ ಶಾಲೆ ಕಿಟಕಿ ಗಾಜು ಹೊಡೆದು ಪುಂಡಾಟ : ಇಬ್ಬರ ವಿರುದ್ಧ ದೂರು

ಪೊಲೀಸರು ನೀಡಿರುವ ನೋಟಿಸ್ ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ ಅವರು ಎಫ್‌ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇ.ಡಿ.ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್‌ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್‌ಐಅರ್ ಪ್ರತಿ ನೀಡಿ ಎಂದು ಕೇಳುತ್ತೇನೆ” ಎಂದು ತಿಳಿಸಿದರು.

ಕೆ.ಸಿ ವೇಣುಗೋಪಾಲ್ ಹಾಗೂ ಸುರ್ಜೆವಾಲ ಅವರನ್ನು ಭೇಟಿಯಾಗಿರುವ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡಬೇಕು. ಸುರ್ಜೆವಾಲ ಅವರನ್ನು, ಮಲ್ಲಿಕಾರ್ಜುನ ಖರ್ಗೆ ಸಾಹೇಬರನ್ನು, ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಬೇಕು. ನಿನ್ನೆ ಇಂದಿರಾ ಭವನದಲ್ಲಿ ನಡೆದ ಭೋಜನ ಕೂಟದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೆ” ಎಂದು ತಿಳಿಸಿದರು.

ವೈಯಕ್ತಿಕವಾಗಿ ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಇಂದು ಖರ್ಗೆ ಸಾಹೇಬರ ಜೊತೆಯಲ್ಲೇ ದಾವಣಗೆರೆಗೆ ಹೋಗುತ್ತಿದ್ದೇವೆ. ತುರ್ತು ಕಾರಣಕ್ಕೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಮಂಜು ಕವಿದ ವಾತಾವರಣ ಇರುವ ಕಾರಣಕ್ಕೆ ತಡವಾಯಿತು. ಅಧಿವೇಶನ ಮುಗಿದ ಬಳಿಕ ಮತ್ತೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಪಕ್ಷದಲ್ಲಿ ನಮ್ಮ ಅವರ ಮಧ್ಯೆ ಮಾತುಕತೆ ಇದ್ದೇ ಇರುತ್ತದೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ” ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

8 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

10 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

10 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

10 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

10 hours ago