ರಾಜ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ ನೋಟಿಸ್‌ ನೀಡಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಇನಾಯತ್‌ ಆಲಿ ಅವರಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ.

ಒಂದು ವಾರದಲ್ಲಿ ತನಿಖೆಗೆ ಹಾಜರಾಗುವಂತೆ ಡಿಕೆ ಆಪ್ತ ಇನಾಯತ್‌ಗೆ ನೋಟಿಸ್‌ ನೀಡಲಾಗಿದೆ. ವಿನಾಯತ್‌ ಅವರ ಮನೆಗೆ ಬಂದು ದೆಹಲಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಪ್ರಕರಣ ಸಂಬಂಧ ಹಲವು ವರ್ಷಗಳಿಂದ ಇನಾಯತ್‌ ವಿಚಾರಣೆ ನಡೆದಿತ್ತು. ಮುಂದುವರಿದ ಭಾಗವಾಗಿ ದೆಹಲಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ನ್ಯಾಷನಲ್‌ ಹೆರಾಲ್ಡ್‌ ಸಂಸ್ಥೆಗೆ ಇನಾಯತ್‌ ಸಹ ಹಣ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೇಣಿಗೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

12 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

14 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

14 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

14 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

15 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

15 hours ago