ಮಂಗಳೂರು: ಭಯೋತ್ಪಾದನಾ ಚಟುವಟಿಕೆಗಳಿಗೆ ವಿದೇಶಗಳ ಸಂಪರ್ಕದ ಸಾಧ್ಯತೆ ಇರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ನಿಗಾ ವಹಿಸಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 2023ರಲ್ಲಿ ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ಕಾರ್ಯಾಚರಣೆ ನಡೆಸಿದ್ದು, ಕೇಂದ್ರ ತನಿಖಾ ದಳ ರಾಜ್ಯದಿಂದ ಮಾಹಿತಿ ಪಡೆದು 2-3 ಜನರನ್ನು ಗುರುತಿಸಿತ್ತು. ಅದರ ಮುಂದುವರೆದ ಭಾಗವಾಗಿ ಪ್ರಸ್ತುತ ಮೂರ್ನಾಲ್ಕು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮುಂದೆ ಯಾವ ರೀತಿಯ ತನಿಖೆ ನಡೆಯಲಿದೆ ಎಂದು ಕಾದುನೋಡಬೇಕಿದೆ ಎಂದರು.





