ರಾಜ್ಯ

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಖಂಡ್ರೆ ವಿಶ್ವಾಸ

ಬೆಂಗಳೂರು: ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ (ಅ.9) ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ತಮ್ಮ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದು, ಈ ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ ಎಂದು ತಿಳಿಸಿರುವುದಾಗಿ ಖಂಡ್ರೆ ಹೇಳಿದರು.

ಮಹದಾಯಿ ನದಿಯ ಎರಡು ಉಪನದಿಗಳಾದ ಕಳಸಾ ಮತ್ತು ಬಂಡೂರಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸುವ ಈ ಯೋಜನೆಗೆ ಗೋವಾ ರಾಜ್ಯ ಸರ್ಕಾರ ತಕರಾರು ಮಾಡುತ್ತದೆ. ಆದರೆ, 2018ರ ಆಗಸ್ಟ್ 14ರಂದು ಮಹಾದಾಯಿ ನದಿ ನೀರು ವಿವಾದ ನ್ಯಾಯಾಧಿಕರಣ ನೀಡಿರುವ ವರದಿ ಸಹಿತವಾದ ನಿರ್ಣಯದಲ್ಲಿ ಕಳಸಾ-ಬಂಡೂರಿ ಯೋಜನೆಯಡಿ 3.9 ಟಿಎಂಸಿ ನೀರನ್ನು ತಿರುಗಿಸಲು ಅವಕಾಶ ನೀಡಿದೆ. ಆದರೆ ಇದಕ್ಕೆ ಪರಿಸರ ತೀರುವಳಿ ಅನುಮೋದನೆ ಅಗತ್ಯ ಎಂದು ಹೇಳಿದೆ ಎಂಬ ಅಂಶವನ್ನು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಮಂಡಳಿ ಸಭೆಗೆ ಮನವರಿಕೆ ಮಾಡಿಸಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಕೇಂದ್ರೀಯ ಜಲ ಆಯೋಗ 2022ರ ಡಿಸೆಂಬರ್ 29ರ ತನ್ನ ಪತ್ರದಲ್ಲಿ ಕಳಸಾ ಬಂಡೂರಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂಬ ವಿಷಯದೊಂದಿಗೆ ಕುಡಿಯುವ ನೀರಿನ ಯೋಜನೆಗಳ ಸಂಬಂಧ ಸುಪ್ರೀಂಕೋರ್ಟ್ ತೀರ್ಪುಗಳನ್ನೂ ಉಲ್ಲೇಖಿಸಿದ್ದು, ನಿನ್ನೆಯ ಸಭೆಯಲ್ಲಿ ಫಲಪ್ರದವಾದ ಮತ್ತು ಸಕಾರಾತ್ಮಕವಾದ ಚರ್ಚೆ ಆಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಮುಂದಿನ ಸಭೆಯಲ್ಲಿ ಅನುಮೋದನೆ ದೊರಕುವ ನಿರೀಕ್ಷೆ ಇದೆ ಎಂದು ಈಶ್ವರ ಖಂಡ್ರೆ ತಿಳಿಸದರು.

ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ವತಿಯಿಂದ ಮಂಡಳಿಗೆ ವಿವರವಾದ ಪತ್ರ ಬರೆಯಲಾಗುವುದೂ ಎಂದೂ ಖಂಡ್ರೆ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

14 mins ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

21 mins ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

27 mins ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

33 mins ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

11 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

11 hours ago