ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಟೇಪುಗಳನ್ನು ಹಂಚಿದ ಆರೋಪಕ್ಕೆ ನವೀನ್ ಗೌಡ ಹಾಗೂ ಚೇತನ್‌ನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮ್ಮ ಬಂಧನದ ಅರಿವಿದ್ದ ನವೀನ್ ಗೌಡ ಮತ್ತು ಚೇತನ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಅದೇ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಉಚ್ಛ ನ್ಯಾಯಾಲಯಕ್ಕೆ ಬಂದ ಬಳಿಕ ಎಸ್‌ಐಟಿ ಅವರು ಸ್ಥಳದಲ್ಲಿಯೇ ಅವರನ್ನು ಬಂಧಿಸಿದ್ದಾರೆ.
ಇನ್ನು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್ ಅವರ ವೀಡಿಯೋಗಳಿರುವ ಪೆನ್‌ಡ್ರೈವ್‌ಗಳನ್ನು ಹಂಚಿದ ಆರೋಪವನ್ನು ಐವರು ಎದುರಿಸುತ್ತಿದ್ದು, ಇದರಲ್ಲಿ ನವೀನ್ ಗೌಡ ಮತ್ತು ಚೇತನ್ ಹೆಸರು ಸಹಾ ಬೆಳಕಿಗೆ ಬಂದಿತ್ತು. ನಂತರ ಈ ವಿಡಿಯೋಗಳಲ್ಲಾ ವೈರಲ್ ಆದ ಬಳಿಕ ಈ ಇಬ್ಬರು ತಲೆ ಮರೆಸಿಕೊಂಡಿದ್ದರು. ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಿಚಾರಣೆಗೆ ಬಂದ ವೇಳೆ ಎಸ್‌ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆಗಾಗಿ ಕರೆದೊಯ್ದಿದ್ದಾರೆ.





