ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದ ಸುವರ್ಣ ಗಳಿಗೆಯಲ್ಲಿ ನವರಾತ್ರಿ ಜನಪದ ರಂಗೋತ್ಸವವು ಯಶಸ್ವಿಯಾಗಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಆಶಿಸಿದರು.
ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು ಕಲಾಮಂದಿರದಲ್ಲಿನ ರಂಗಾಯಣದ ಭೂಮಿಗೀತ ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ “ನವರಾತ್ರಿ ಜಾನಪದ ರಂಗ ಉತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಂಗಾಯಣಕ್ಕೆ 35 ವರ್ಷಗಳ ಸುದೀರ್ಘ ಇತಿಹಾಸವಿದ್ದು, ಅಳಿವಿನಂಚಿನ ಜನಪದ ಕಲಾಪ್ರಕಾರಗಳಿಗೆ ದಸರೆಯಲ್ಲಿ ರಂಗಾಯಣವೂ ಸಾಕ್ಷಿಯಾಗಲಿದೆ ಎಂದರು.
ಜನಪದ ಕಲೆಗಳಿಂದ ಎಲ್ಲಾ ಕಲೆಗಳು ಹುಟ್ಟಿದ್ದು, ರಂಗಾಯಣವು ಇನ್ನೂ ಎತ್ತರದ ಮಟ್ಟಕ್ಕೆ ಬೆಳೆದು ಹೊಸ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕೊಡಲಿದೆ ಎಂದು ಹೇಳಿದರು.
ರಂಗಾಯಣದ ನಿರ್ದೇಶಕರಾದ ಸತೀಶ್ ತಿಪಟೂರು ಮಾತನಾಡಿ, ಕರ್ನಾಟಕದ ಸುವರ್ಣ ಸಂಭ್ರಮದ 50 ವರ್ಷದ ಕಾಲಘಟ್ಟದಲ್ಲಿ ಈ ವರ್ಷದ ನವರಾತ್ರಿ ಉತ್ಸವವನ್ನು 9 ದಿನಗಳ ಕಾಲ ಜನಪದ ರಂಗ ಉತ್ಸವವಾಗಿ ರೂಪಿಸಲಾಗಿದೆ. ರಂಗಯಾಣವು ಪ್ರತೀ ವರ್ಷ ಎಲ್ಲಾ ನಾಟಕಗಳನ್ನು ಸೇರಿದಂತೆ ಆಧುನಿಕ ನಾಟಕಗಳನ್ನು ಆಯೋಜಿಸಲಾಗುತ್ತಿದೆ. ಆದರೆ ಈ ಬಾರಿ ವಿಷೇಶವಾಗಿ ಕರ್ನಾಟಕದ ಎಲ್ಲಾ ಭಾಗಗಳಿಗೆ ಪ್ರಾತಿನಿತ್ಯ ಹಾಗೂ ಅಳಿವಿನಂಚಿನಲ್ಲಿರುವ ಎಲ್ಲಾ ಜನಪದ ಕಲೆಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದರು.
ರಂಗ ಉತ್ಸವದಲ್ಲಿ ಈ ಬಾರಿಯ ವಿಶೇಷ ಕಾರ್ಯಕ್ರಮಗಳು
ದೊಡ್ಡಾಟ, ಶ್ರೀಕೃಷ್ಣಪಾರಿಜಾತ, ಸಂಗ್ಯಾಬಾಳ್ಯದಂತಹ ಸಣ್ಣಾಟ, ಮೂಡಲಪಾಯ ಯಕ್ಷಗಾನ ಪ್ರದರ್ಶನ, ತೊಗಲು ಬೊಂಬೆಯಾಟ, ನೀಲಗಾರರ ಮೇಳ (ಮಂಟೇಸ್ವಾಮಿ ಕುರಿತು ಗೀತೆಗಳ ಪ್ರಸ್ತುತಿ ಕಾರ್ಯಕ್ರಮ), ಕರಾವಳಿ ಯಕ್ಷಗಾನ ಮೊದಲಾದ ಕಾರ್ಯಕ್ರಮಗಳನ್ನು 9 ದಿನಗಳವರೆಗೆ ನಡೆಸಲಾಗುವುದು.
ಈ ಸಂದರ್ಭದಲ್ಲಿ ರಂಗಭೂಮಿಯ ಸಾಧಕ ಮೈಸೂರು ಗುರುರಾಜ್ ಅವರಿಗೆ ‘ರಂಗ ಗೌರವ ಪುರಸ್ಕಾರ’ ಮಾಡಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ.ಕೆ. ಧರಣಿದೇವಿ ಮಾಲಗತ್ತಿ, ಜನಪದ ವಿದ್ವಾಂಸರಾದ ಪಿ.ಕೆ ರಾಜಶೇಖರ್, ರಂಗ ಸಮಾಜದ ಸದಸ್ಯರಾದ ರಾಜಪ್ಪ ದಳವಾಯಿ , ಸುರೇಶ್ ಬಾಬು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ. ಎನ್ ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…