ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಅಗತ್ಯ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಆರು ಮಂದಿ ನಕ್ಸಲರು ಶರಣಾಗಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು. ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಶರಣಾಗಿದ್ದಾರೆ.
ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…