Mysore
18
few clouds

Social Media

ಶನಿವಾರ, 28 ಡಿಸೆಂಬರ್ 2024
Light
Dark

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ

ಮುಂಬೈ: ಎನ್‌ಸಿಪಿ ಅಜಿತ್‌ ಪವಾರ್‌ ಬಣದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮುಂಬೈನ ಬಾಂದ್ರಾದ ಪೂರ್ವ ವಲಯದ ನಿರ್ಮಲ್‌ ನಗರದಲ್ಲಿ ಈ ಘಟನೆ ನಡೆದಿದೆ.

ಬಾಬಾ ಸಿದ್ಧಿಕಿ ಅವರು, ಮನೆಯಿಂದ ಹೊರ ಬರುವಾಗ ಬೈಕ್‌ನಿಂದ ಬಂದ ಮೂವರು ದುಷ್ಕರ್ಮಿಗಳು ಬಾಬಾ ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ  ಮೃತರಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ ಸಹಚರರು ಎಂದು ತಿಳಿದುಬಂದಿದೆ.

ಘಟನೆಯ ನಂತರ ಫೋರೆನ್ಸಿಕ್‌ ತಂಡವು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿದ್ದು, ದಾಳಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಕೃತ್ಯ ನಡೆದ ಸ್ಥಳದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ವಿಭಾಗಕ್ಕೆ ಹಸ್ತಾಂತರ ಮಾಡಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವರು, ಸಿದ್ಧಿಕ್‌ರನ್ನು ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

 

Tags: