ಮುಂಬೈ: ಎನ್‌ಸಿಪಿ ಅಜಿತ್ ಪವಾರ್ ಬಣದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮುಂಬೈನ ಬಾಂದ್ರಾದ ಪೂರ್ವ ವಲಯದ ನಿರ್ಮಲ್ ನಗರದಲ್ಲಿ ಈ ಘಟನೆ ನಡೆದಿದೆ.
ಬಾಬಾ ಸಿದ್ಧಿಕಿ ಅವರು, ಮನೆಯಿಂದ ಹೊರ ಬರುವಾಗ ಬೈಕ್‌ನಿಂದ ಬಂದ ಮೂವರು ದುಷ್ಕರ್ಮಿಗಳು ಬಾಬಾ ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹಚರರು ಎಂದು ತಿಳಿದುಬಂದಿದೆ.
ಘಟನೆಯ ನಂತರ ಫೋರೆನ್ಸಿಕ್ ತಂಡವು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿದ್ದು, ದಾಳಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಕೃತ್ಯ ನಡೆದ ಸ್ಥಳದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ವಿಭಾಗಕ್ಕೆ ಹಸ್ತಾಂತರ ಮಾಡಲಾಗಿದೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು, ಸಿದ್ಧಿಕ್‌ರನ್ನು ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…