ರಾಜ್ಯ

ಮೋದಿಯವರಿಗೆ ಎನ್‌ಡಿಎ ಸೋಲು ಸ್ಪಷ್ಟವಾಗಿ ಕಾಣಿಸಿ ವಿಚಿತ್ರವಾಗಿ ಮಾತಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು (ಮೇ.27) ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ನೆಹರೂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದು ವಿವರಿಸಿದರು.

ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು. ಭಾರತವನ್ನು ಇಡೀ ವಿಶ್ವದಲ್ಲಿ ಅತಿದೊಡ್ಡ ಮತ್ತು ಸದೃಢ ಪ್ರಜಾಪ್ರಭುತ್ವ ದೇಶವನ್ನಾಗಿ ರೂಪಿಸಿದ್ದು ನೆಹರೂ ಎಂದು ಬಣ್ಣಸಿದರು.

ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್‌ಡಿಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿರು ಪ್ರಧಾನಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ ಎಂದು ವ್ಯಂಗ್ಯವಾಡಿದರು.

ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ. ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರೂ, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು‌. ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು , ದೇಶದ ಕೈಗಾರಿಕೆಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ ಎಂದರು.

ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು ಎಂದರು.

ತಮ್ಮನ್ನು ತೀವ್ರವಾಗಿ ಟೀಕಿಸುತ್ತಿದ್ದ ಲೋಹಿಯಾ ಅವರ ಮಾತನ್ನು ಪಾರ್ಲಿಮೆಂಟಿನಲ್ಲಿ ಕುಳಿತು ನೆಹರೂ ಆಲಿಸುತ್ತಿದ್ದರು. ಸ್ಪಂದಿಸುತ್ತಿದ್ದರು‌. ಇದು ನೆಹರೂ ರೂಢಿಸಿಕೊಂಡಿದ್ದ ರಾಜಕೀಯ ಮೌಲ್ಯ ಎಂದರು.

ನಮ್ಮ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಸರಣಿ ಸುಳ್ಳುಗಳನ್ನು ಹೇಳುತ್ತಿದೆ. 28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿಗೆ ಈಗ ಸತ್ಯ ಗೊತ್ತಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ ಲೋಕಸಭೆಯಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆದ್ದೇ ಗೆಲ್ಲುತ್ತದೆ. 28 ಕ್ಕೆ 28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿ ಬಾಯಿ ಬಂದಾಗಿದೆ. ಇಡೀ ದೇಶದಲ್ಲಿ ಬಿಜೆಪಿ ತಿರಸ್ಕೃತಗೊಂಡಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

3 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

3 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

3 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

3 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

4 hours ago