Mysore
19
few clouds

Social Media

ಗುರುವಾರ, 19 ಫೆಬ್ರವರಿ 2026
Light
Dark

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

nikhil kumaraswamy siddaramaiah

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ರಾಜ್ಯ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಗೊಂದಲ ವಿಚಾರ ಕುರಿತು ಸ್ಪಷ್ಟನೆ ನೀಡಿದರು.

ಈ ವಿಚಾರಗಳು ನಾಲ್ಕು ಗೋಡೆಗಳ ಒಳಗೆ ಚರ್ಚೆ ಆಗಬೇಕು. ಹಾದಿಬೀದಿಯಲ್ಲಿ ಚರ್ಚಿಸಿ ಇತ್ಯರ್ಥವಾಗುವ ವಿಚಾರ ಅಲ್ಲ. ಲೋಕಸಭೆ ಚುನಾವಣೆಯಿಂದಲೂ ಎರಡೂ ಪಕ್ಷಗಳ ಮೈತ್ರಿ ಇದೆ. ಅಂದಿನಿಂದಲೂ ನಮ್ಮನ್ನು ಅತ್ಯಂತ ಗೌರವದಿಂದ ನೋಡಿಕೊಂಡಿದ್ದಾರೆ. ಅದರಲ್ಲಿ ಯಾವುದೇ ಎರಡನೇ ಪ್ರಶ್ನೆ ಇಲ್ಲ. ಈ ಮೈತ್ರಿಗೆ ಬಿಜೆಪಿ ಹೈಕಮಾಂಡ್‌ ನಾಯಕರ ಮಾರ್ಗದರ್ಶನ ಇದೆ. ಬಿಜೆಪಿಯಾಗಿರಲಿ ಜೆಡಿಎಸ್‌ ಆಗಿರಲಿ ಯಾರೂ ಕೂಡ ಹೊರಗೆ ಬಂದು ಮಾತನಾಡಬಾರದು ಎಂದು ಹೇಳಿದರು.

ಇನ್ನು ಬಿಜೆಪಿ, ಜೆಡಿಎಸ್‌ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ. ಇದನ್ನು ಬರೆದಿಟ್ಟುಕೊಳ್ಳಿ ಎಂದು ಹೇಳಿದ ಅವರು, ನಾವು ಮೈತ್ರಿ ಧರ್ಮವನ್ನು ಪಾಲಿಸುತ್ತೇವೆ. ಲೋಕಸಭೆ ಗೆದ್ದಂತೆ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

Tags:
error: Content is protected !!