nikhil kumaraswamy siddaramaiah
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಗೊಂದಲ ವಿಚಾರ ಕುರಿತು ಸ್ಪಷ್ಟನೆ ನೀಡಿದರು.
ಈ ವಿಚಾರಗಳು ನಾಲ್ಕು ಗೋಡೆಗಳ ಒಳಗೆ ಚರ್ಚೆ ಆಗಬೇಕು. ಹಾದಿಬೀದಿಯಲ್ಲಿ ಚರ್ಚಿಸಿ ಇತ್ಯರ್ಥವಾಗುವ ವಿಚಾರ ಅಲ್ಲ. ಲೋಕಸಭೆ ಚುನಾವಣೆಯಿಂದಲೂ ಎರಡೂ ಪಕ್ಷಗಳ ಮೈತ್ರಿ ಇದೆ. ಅಂದಿನಿಂದಲೂ ನಮ್ಮನ್ನು ಅತ್ಯಂತ ಗೌರವದಿಂದ ನೋಡಿಕೊಂಡಿದ್ದಾರೆ. ಅದರಲ್ಲಿ ಯಾವುದೇ ಎರಡನೇ ಪ್ರಶ್ನೆ ಇಲ್ಲ. ಈ ಮೈತ್ರಿಗೆ ಬಿಜೆಪಿ ಹೈಕಮಾಂಡ್ ನಾಯಕರ ಮಾರ್ಗದರ್ಶನ ಇದೆ. ಬಿಜೆಪಿಯಾಗಿರಲಿ ಜೆಡಿಎಸ್ ಆಗಿರಲಿ ಯಾರೂ ಕೂಡ ಹೊರಗೆ ಬಂದು ಮಾತನಾಡಬಾರದು ಎಂದು ಹೇಳಿದರು.
ಇನ್ನು ಬಿಜೆಪಿ, ಜೆಡಿಎಸ್ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ. ಇದನ್ನು ಬರೆದಿಟ್ಟುಕೊಳ್ಳಿ ಎಂದು ಹೇಳಿದ ಅವರು, ನಾವು ಮೈತ್ರಿ ಧರ್ಮವನ್ನು ಪಾಲಿಸುತ್ತೇವೆ. ಲೋಕಸಭೆ ಗೆದ್ದಂತೆ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…