Mysore
30
few clouds

Social Media

ಗುರುವಾರ, 19 ಮಾರ್ಚ್ 2026
Light
Dark

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ 

cm siddaramaiah

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಕಾಲಾತೀತ, ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳನ್ನು ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ನಿನ್ನೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಮನವಿ ಮಾಡಿದ್ದರು.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕುಮಾರಸ್ವಾಮಿ ಅವರು ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಕಿಡಿಕಾರಿದರು.

ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಕುಮಾರಸ್ವಾಮಿ ಅವರಿಗೆ ಏನು ಅನಿಸಿದೆಯೋ ಅದನ್ನು ಕೇಂದ್ರಕ್ಕೆ ಬರೆದಿದ್ದಾರೆ. ಅದೆಲ್ಲಾ ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.

Tags:
error: Content is protected !!