ರಾಜ್ಯ

ನೀಟ್‌ | ರಾಜ್ಯಕ್ಕೆ ಹೆಚ್ಚುವರಿ ವೈದ್ಯಕೀಯ ಸೀಟು ಹಂಚಿಕೆ

ಬೆಂಗಳೂರು : ಪ್ರಸಕ್ತ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‍ಎಂಸಿ) ಮಂಜೂರು ಮಾಡಿದೆ.

ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣಿಸಿದೆ.ನೀಟ್ ಫಲಿತಾಂಶದ ನಂತರ ಪ್ರಕಟಿಸಿದ್ದ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ 9,263 ಸೀಟುಗಳು ಲಭ್ಯವಿದ್ದವು. ರಾಜ್ಯದ ಎಂಟು ವೈದ್ಯಕೀಯ ಕಾಲೇಜುಗಳಲ್ಲಿ ತಲಾ 50 ಸೀಟುಗಳ ಹೆಚ್ಚಳಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಅನುಮತಿ ನೀಡಿದ್ದು, ರಾಜ್ಯದಲ್ಲಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ 9,663ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಮೈಸೂರು| ಅಗ್ನಿ ಅವಘಡ: ವೃದ್ಧ ಸಜೀವ ದಹನ

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ಸತತದ ಪ್ರಯತ್ನದ ಫಲವಾಗಿ ಬಹುವರ್ಷಗಳ ನಂತರ ರಾಜ್ಯಕ್ಕೆ ಇಷ್ಟು ದೊಡ್ಡ ಮೊತ್ತದ ವೈದ್ಯಕೀಯ ಸೀಟುಗಳು ಲಭ್ಯವಾಗಿವೆ. ರಾಜ್ಯ ಸರ್ಕಾರ 15 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ 100 ಹೆಚ್ಚುವರಿ ಸೀಟುಗಳಿಗಾಗಿ ಮನವಿ ಮಾಡಿತ್ತು. ಆದರೆ ಮೂಲಸೌಕರ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಎನ್‍ಎಂಸಿ ವಿನಂತಿಯನ್ನು ತಿರಸ್ಕರಿಸಿತ್ತು.

ರಾಷ್ಟ್ರೀಯ ವೈದ್ಯಕೀಯ ಆಯೋಗ ಮಂಜೂರು ಮಾಡಿರುವ ಸೀಟುಗಳಲ್ಲಿ ಸರ್ಕಾರದ ಅಧೀನದಲ್ಲಿರುವ 8 ವೈದ್ಯಕೀಯ ಕಾಲೇಜುಗಳಿಗೆ ತಲಾ 50 ಹೆಚ್ಚುವರಿ ಸೀಟುಗಳು ಹಾಗೂ ಒಂದು ಡೀಮ್ಡ್ ವಿಶ್ವವಿದ್ಯಾನಿಲಯಕ್ಕೆ ಮಂಜೂರು ಮಾಡಲಾಗಿದೆ.

ಹೆಚ್ಚುವರಿ ಸೀಟುಗಳನ್ನು ಪಡೆಯುವ ಕಾಲೇಜುಗಳಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು ಮತ್ತು ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಸೇರಿವೆ.

ಇದೇ ವೇಳೆ ಪ್ರವೇಶ ಹೆಚ್ಚಳಕ್ಕೆ ಅರ್ಜಿ ಸಲ್ಲಿಸಿದ್ದ ಏಳು ಕಾಲೇಜುಗಳಾದ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ ಅನುಮೋದನೆ ದೊರೆತಿಲ್ಲ.ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಪಟ್ಟಿಯಲ್ಲಿ, ರಾಮನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಕನಕಪು- ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.

ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಕೇಂದ್ರದಲ್ಲಿ ತಲಾ 100 ಸೀಟುಗಳ ಹೆಚ್ಚಳಕ್ಕೆ ಮನವಿ ಮಾಡಲಾಗಿತ್ತು. ತಲಾ 50 ಸೀಟುಗಳನ್ನು ಅನುಮೋದಿಸಿದೆ. ಹುಬ್ಬಳ್ಳಿಯ ಜೆಜಿಎಂಎಂ ಕಾಲೇಜಿಗೂ (ಡೀಮ್ಡ್) 50 ಸೀಟು ಹೆಚ್ಚಿಸಲಾಗಿದೆ.ರಾಮನಗರ ಮತ್ತು ಕನಕಪುರದಲ್ಲಿ ಸ್ಥಾಪಿಸಲಾಗಿರುವ ಎರಡು ವೈದ್ಯಕೀಯ ಕಾಲೇಜುಗಳಿಗೆ 250 ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಜೊತೆಗೆ ಹುಬ್ಬಳ್ಳಿ ಜೆಎಂಎಂಎಂಸಿ , ತುಮಕೂರಿನ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜುಗಳು ತಮಗೂ 50 ವೈದ್ಯಕೀಯ ಸೀಟುಗಳನ್ನ ನೀಡಬೇಕೆಂಬ ಪ್ರಸ್ತಾವನೆಗೆ ಎನ್‍ಎಂಸಿ ಅನುಮೋದನೆ ನೀಡಿಲ್ಲ.

ಆದರೆ ಈ ಸೀಟುಗಳು ಹೊಸ ಆಯ್ಕೆ ಪ್ರವೇಶಕ್ಕೆ ಲಭ್ಯವಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಏಇಂ) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕೆಇಎ ಎರಡನೇ ಸುತ್ತಿನ ತಾತ್ಕಾಲಿಕ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 12 ರಂದು ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ತನ್ನ ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಪೂರ್ಣಗೊಳಿಸಲು ಕಾಯುತ್ತಿದೆ.ದೇಶಾದ್ಯಂತ ಪ್ರಸಕ್ತ ವರ್ಷ 8000 ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಲಾಗುವುದು ಎಂದು ಎನ್‍ಎಂಸಿಯ ಅಧ್ಯಕ್ಷ ಅಭಿಜಿತ್ ಚಂದ್ರಕಾಂತ್ ಸೇಠ್ ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

15 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

15 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

16 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

16 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

16 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

16 hours ago