ರಾಜ್ಯ

ನೀಟ್: ಮರುಪರೀಕ್ಷೆ ಹಾಗೂ ತನಿಖೆಗೆ ಸಿಎಂ ಆಗ್ರಹ

ಮೈಸೂರು: ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಕೆಲವು ಅಭ್ಯರ್ಥಿಗಳಿಗೆ ರ್ಯಾಂಕ್‌ ನೀಡುವುದರಲ್ಲಿ  ತಾರತಮ್ಯವಾಗಿದೆ. ಅಭ್ಯಸ ಮಾಡಿ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಿ, ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಅವರು ಇಂದು(ಜೂ.15) ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು (ಎನ್.ಟಿ.ಎ) ನೀಟ್ ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ. ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್ ಕೊಟ್ಟು ಉತ್ತೀರ್ಣ ಮಾಡುವುದು ಎಷ್ಟು ಸರಿ? ಗ್ರೇಸ್‌ ಮಾರ್ಕ್ಸ್‌ ನೀಡುವುದು ಕೆಟ್ಟ ಅಭ್ಯಾಸ ಎಂದು ಹೇಳಿದರು.

ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ
ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಆರ್.ಎಸ್.ಎಸ್ ನಾ ರಾಜಕೀಯ ಮುಖವಾಡ ಇಲ್ಲಿಯ ಜನರಿಗೆ ತಿಳಿದಿದೆ. ಈ ಬಾರಿ ಉತ್ತರ ಭಾರತದಲ್ಲಿಯೂ ಬಿಜೆಪಿಗೆ ಹಿನ್ನಡೆಯಾಗಿದೆ. ಬಿಜೆಪಿಯ ಅಹಂಕಾರಕ್ಕೆ ಜನರು ತಕ್ಕ ಪಾಠ ಕಲಿಸಿರುವುದಾಗಿ ಆರ್.ಎಸ್.ಎಸ್ ನ ಮುಖ್ಯಸ್ಥರೇ ಹೇಳಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

3 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

12 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago