ರಾಜ್ಯ

NEET: ಕೆಇಎಯಿಂದ ಸೀಟ್‌ ಹಂಚಿಕೆ; ದಲ್ಲಾಳಿಗಳ ಮೋಸಕ್ಕೆ ಬಲಿಯಾಗದಂತೆ ಮನವಿ

ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಕರೆ ನೀಡಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು ಎಂದು ಸಲಹೆ ನೀಡಿದರು.

ವೈದ್ಯಕೀಯ ಸೀಟು ಕೊಡಿಸುತ್ತೀವೆ, ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ ನಿಮಗೆ, ನಮಗೆ ಅವರು ಗೊತ್ತಿದ್ದಾರೆ, ಇವರು ಗೊತ್ತಿದ್ದಾರೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು.

ನೀಟ್‌ ಫಲಿತಾಂಶಗಳು ಈಗಾಗಲೇ ಪ್ರಕಟವಾಗಿವೆ. ಕರ್ನಾಟಕದಲ್ಲಿ 1,47,782 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 1,42,369 ವಿದ್ಯಾರ್ಥಿಗಳು ಹಾಜರಾಗಿದ್ದರು, ಈ ಪೈಕಿ 83,582 ಅರ್ಹತೆ ಪಡೆದುಕೊಂಡಿದ್ದಾರೆ.

ಹೇಗಾದರೂ ಮಾಡಿ ಒಳ್ಳೆ ಕಾಲೇಜಿನಲ್ಲಿ ಸೀಟು ಪಡೆಯಬೇಕು ಎಂಬ ಆತುರಕ್ಕೆ ಬರಬೇಡಿ. ನಿಮ್ಮ ಆತಂಕವನ್ನು ದುರುಪಯೋಗಪಡಿಸಿಕೊಳ್ಳಲು ಮಧ್ಯವರ್ತಿಗಳು ಕಾದಿರುತ್ತಾರೆ. ಅವರ ಮೋಸದ ಜಾಲಕ್ಕೆ ಬೀಳಬೇಡಿ ಎಂದು ಸಚಿವರು ಸಲಹೆ ನೀಡಿದ್ದಾರೆ.

ಕೆಇಎಯಿಂದ ಸೀಟು ಹಂಚಿಕೆ: ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದಲೇ ಸೀಟುಗಳ ಹಂಚಿಕೆ ಕ್ರಮಬದ್ಧವಾಗಿ ಆಗುತ್ತದೆ. ಅದರಂತೆ ನಿಯಮಗಳನ್ನು ಪಾಲಿಸಿ. ವಿದ್ಯಾರ್ಥಿಗಳು ಮತ್ತು ಪೋಷಕರು ಇದನ್ನು ತಪ್ಪದೇ ತಿಳಿದುಕೊಳ್ಳಬೇಕು ಎಂದು ಸಚಿವರು ವಿವರಿಸಿದ್ದಾರೆ.

ಅತ್ಯುತ್ತಮ ಸಾಧನೆ ಮಾಡಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ, ಎಲ್ಲ ವಿದ್ಯಾರ್ಥಿಗಳ ಭವಿಷ್ಯವೂ ಉತ್ತಮವಾಗಿರಲಿ ಎಂದು ಹಾರೈಸುತ್ತೇನೆ ಎಂದು ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ದಲ್ಲಾಳಿಗಳಿಗೆ ಎಚ್ಚರಿಕೆ: ಸೀಟು ಕೊಡಿಸುತ್ತೇನೆಂದು ವಿದ್ಯಾರ್ಥಿಗಳು ಅಥವಾ ಪೋಷಕರನ್ನು ದಿಕ್ಕು ತಪ್ಪಿಸಿ ಮೋಸ ಮಾಡಿದವರು ಕಂಡುಬಂದರೆ, ಅಂಥ ದಲ್ಲಾಳಿಗಳನ್ನು ಪತ್ತೆ ಹಚ್ಚಿ, ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ಸಹಿಸುವುದಿಲ್ಲ. ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

10 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

11 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

11 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

11 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

11 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

11 hours ago