ರಾಜ್ಯ

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೆ ದೇಶದಾದ್ಯಂತ ಒಂದೇ ಹಂತದಲ್ಲಿ ನಡೆಯುತ್ತದೆ.

ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಕನಸು ನನಸಾಗಿಸಲು ಈ ಪರೀಕ್ಷೆಗೆ ಸಿದ್ಧರಾಗಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಲೀಕ್, ಅಕ್ರಮ ಮತ್ತು ಅನ್ಯಾಯದ ಆರೋಪಗಳು ಹೆಚ್ಚಾಗಿದ್ದವು.

ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮತ್ತು ಅಸಮಾಧಾನ ಹೆಚ್ಚಾಗಿತ್ತು. ಈ ಬಾರಿ ಅಂತಹ ಕಹಿ ಘಟನೆಗಳು ಪುನರಾವರ್ತನೆಯಾಗದಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಸಕಲ ಎಚ್ಚರಿಕೆ ವಹಿಸಿದೆ. ಈ ಬಾರಿ ಎನ್‌ಟಿಎ ಜೀರೋ ಲೀಕ್ ಪಾಲಿಸಿ ಅನ್ನು ಜಾರಿಗೊಳಿಸಿದೆ.

ಪ್ರಶ್ನೆಪತ್ರಿಕೆಗಳನ್ನು ಮುದ್ರಣದಿಂದ ಪರೀಕ್ಷಾ ಕೇಂದ್ರಗಳವರೆಗೆ ಜಿಪಿಎಸ್ ಟ್ರ್ಯಾಕಿಂಗ್‌ನೊಂದಿಗೆ ಪೊಲೀಸ್ ಎಸ್ಕಾರ್ಟ್‌ನಲ್ಲಿ ಸಾಗಿಸಲಾಗುತ್ತಿದೆ. ಡಬಲ್ ಲಾಕ್ ಸ್ಟ್ರಾಂಗ್‌ರೂಮ್‌ಗಳಲ್ಲಿ 24 ಗಂಟೆ ಸಿಸಿಟಿವಿ ನಿಗಾ ಇರಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ವೆರಿಫಿಕೇಷನ್ ಮತ್ತು ಫೇಷಿಯಲ್ ರೆಕಗ್ನಿಷನ್ ಮತ್ತು ಫಿಂಗರ‍್ಪ್ರಿಂಟ್, ಹಾಗೂ ಎಐ ಆಧಾರಿತ ಸಿಸಿಟಿವಿ ಕ್ಯಾಮೆರಾಗಳು, ೫ಜಿ ಜ್ಯಾಮರ‍್ಗಳು, ಡಿಜಿಟಲ್ ಫ್ರಿಸ್ಕಿಂಗ್ ಮತ್ತು ಲೈವ್ ಮಾನಿಟರಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಮೂಲ ಗುರುತಿನ ಚೀಟಿ ಜೊತೆಗೆ ತರಬೇಕು. ಮೊಬೈಲ್ ಫೋನ್ ಕ್ಯಾಲ್ಕುಲೇಟರ್, ವಾಚ್, ನೀರು ಬಾಟಲ್ ಸೇರಿದಂತೆ ಹಲವು ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಬಾರದು. ಎಲ್ಲಾ ಕೇಂದ್ರಗಳಲ್ಲಿ ತೀವ್ರ ಫ್ರಿಸ್ಕಿಂಗ್ ನಡೆಯಲಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಲೀಕ್ ಸುದ್ದಿಗಳನ್ನು ನಂಬದಂತೆ ಎನ್‌ಟಿಎ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

7 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

20 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

20 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago