ರಾಜ್ಯ

ಪಾಲಿಕೆ ನೌಕರರೊಂದಿಗೆ ಸಂಧಾನ ಸಭೆ ಯಶಸ್ವಿ : ಮುಷ್ಕರ ವಾಪಸ್

ಬೆಂಗಳೂರು : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ.

ವಿಕಾಸಸೌಧದಲ್ಲಿ ಮಂಗಳವಾರ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮತ್ತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ಪದಾಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು.

ಮಹಾನಗರ ಪಾಲಿಕೆಗಳ ಸಾಮಾನ್ಯ ನೇಮಕಾತಿ ನಿಯಮಗಳು 2011 ಕ್ಕೆ ಸಮಗ್ರ ತಿದ್ದುಪಡಿ ಮಾಡುವುದು, ಮಹಾನಗರ ಪಾಲಿಕೆ ನೌಕರರನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ನೌಕರರೆಂದು ಪರಿಗಣಿಸುವುದು, ಸರ್ಕಾರಿ ನೌಕರರ ರೀತಿಯಲ್ಲಿ ಮಹಾನಗರ ಪಾಲಿಕೆಗಳ ಅಧಿಕಾರಿಗಳು/ನೌಕರರಿಗೂ ಕೆಜಿಐಡಿ, ಜಿಐಎಸ್ ಮತ್ತು ಜಿಪಿಎಫ್ ಸೌಲಭ್ಯಗಳನ್ನು ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ನೌಕರರ ಸಂಘಗಳು ಸರ್ಕಾರ ಮುಂದಿಟ್ಟಿದ್ದವು.

ಈ ಬಗ್ಗೆ ಸಭೆ ನಡೆಸಿದ ಬಳಿಕ ಸಭೆಯ ಬಗ್ಗೆ ಮಾಹಿತಿ ನೀಡಿದ ಸಚಿವ ಬೈರತಿ ಸುರೇಶ ಅವರು, ಪಾಲಿಕೆ ನೌಕರರಿಗೆ ಸಕಾಲಕ್ಕೆ ವೇತನ ನೀಡುವುದು, ಸಿ & ಆರ್ ನಿಯಮಗಳಿಗೆ ತಿದ್ದುಪಡಿ ತರುವ ಕುರಿತು ಆರ್ಥಿಕ ಇಲಾಖೆ ಅನುಮೋದನೆ ಪಡೆಯುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಪೌರಾಡಳಿತ ಆಯುಕ್ತರ ಹುದ್ದೆಗಳನ್ನು ಸೃಜಿಸುವಂತೆ ನೌಕರರು ಬೇಡಿಕೆ ಇಟ್ಟಿದ್ದರು. ಆದರೆ, ಕಾನೂನು ಪರಿಮಿತಿಯೊಳಗೆ ವಲಯ ಆಯುಕ್ತರ ಹುದ್ದೆ ಸೃಜಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಆರ್ಥಿಕ ಇಲಾಖೆ ಅಭಿಪ್ರಾಯ ಬಂದ ತಕ್ಷಣ ಕ್ರಮ ವಹಿಸುವುದಾಗಿ ಭರವಸೆ ನೀಡಿರುವುದಾಗಿ ಹೇಳಿದರು.

ಪರಿಸರ ಇಂಜಿನಿಯರ್ ನೇಮಕಕ್ಕೆ ಸೂಚನೆ:- ಮಹಾನಗರ ಪಾಲಿಕೆಗಳಲ್ಲಿ ಸಾಕಷ್ಟು ಪರಿಸರ ಇಂಜಿನಿಯರ್ ಗಳ ಹುದ್ದೆಗಳು ಸಾಕಷ್ಟು ಖಾಲಿ ಇವೆ. ಇದರಿಂದ ದೈನಂದಿನ ಕರ್ತವ್ಯಕ್ಕೆ ಅಡ್ಡಿಯಾಗುತ್ತಿದೆ ಎಂಬ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಮಂಜೂರಾಗಿರುವ ಪರಿಸರ ಇಂಜಿನಿಯರ್ ಗಳ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ನೌಕರರಿಗೆ ಗುಂಪು ವಿಮೆ:- ಸರ್ಕಾರಿ ನೌಕರರ ಮಾದರಿಯಲ್ಲಿ ಪಾಲಿಕೆ ನೌಕರರಿಗೂ ಗುಂಪು ವಿಮೆ ಯೋಜನೆ (ಜಿಐಎಸ್) ಜಾರಿಗೆ ತರುವ ಬಗ್ಗೆ ಸರ್ಕಾರ ಮುಕ್ತ ಮನಸು ಹೊಂದಿದೆ. ವಿಮಾ ಕಂತಿನ ಮೊತ್ತದಲ್ಲಿ ನೌಕರರು ತಮ್ಮ ಪಾಲಿನ ಮೊತ್ತವನ್ನು ಪಾವತಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ ಸಚಿವರು, ಈ ಹಿನ್ನೆಲೆಯಲ್ಲಿ ಪಾಲಿಕೆಗಳು ನೌಕರರ ಗುಂಪು ವಿಮೆ ಯೋಜನೆಗೆ ಉಳಿದ ಮೊತ್ತವನ್ನು ಭರಿಸುವುದಾದರೆ ಆಗಬಹುದಾದ ಆರ್ಥಿಕ ಹೊರೆಯನ್ನು ಗಮನಿಸಿ ಅಂತಿಮ ನಿರ್ಧಾರ ಕೈಗೊಳ್ಳುವಂತೆ ಉನ್ನತಾಧಿಕಾರಿಗಳಿಗೆ ಆದೇಶ ನೀಡಿದರು.

ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗೆ ಪ್ರೋತ್ಸಾಹ:- ಪ್ರತಿ ವರ್ಷ ಪಾಲಿಕೆಗಳ ನೌಕರರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಆರ್ಥಿಕ ಹೊರೆಯಾಗದ ರೀತಿಯಲ್ಲಿ ಪಾಲಿಕೆಗಳಿಂದಲೇ ವೆಚ್ಚ ಭರಿಸಲು ಸೂಚನೆ ನೀಡಲಾಗಿದ್ದು, ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ನೌಕರರ ಇನ್ನಿತರ ಬೇಡಿಕೆಗಳನ್ನು ಹಂತ-ಹಂತವಾಗಿ ಈಡೇರಿಸುವ ಭರವಸೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಪಾಲಿಕೆಗಳಿಗೂ ಜ್ಯೋತಿ ಸಂಜೀವಿನಿ:- ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವ ಜ್ಯೋತಿ ಸಂಜೀವಿನಿ ಆರೋಗ್ಯ ವಿಮೆಯನ್ನು ಪಾಲಿಕೆ ನೌಕರರಿಗೂ ವಿಸ್ತರಣೆ ಮಾಡುವ ಬಗ್ಗೆ ಸಹಮತ ವ್ಯಕ್ತಪಡಿಸಲಾಗಿದೆ. ಈ ಯೋಜನೆಯಡಿ ನೌಕರರು ತಮ್ಮ ಪಾಲಿನ ವಿಮಾ ಮೊತ್ತ ಮತ್ತು ಅದಕ್ಕೆ ಸಮಾನವಾದ ಮೊತ್ತವನ್ನು ಪಾಲಿಕೆಗಳು ಭರಿಸುವ ಸಾಧಕ-ಭಾದಕಗಳ ಬಗ್ಗೆ ಪರಿಶೀಲಿಸಲಾಗುತ್ತದೆ. ಇದಲ್ಲದೇ, ನೌಕರರ ಚಿಕಿತ್ಸಾ ವೆಚ್ಚವನ್ನು ಮಂಜೂರು ಮಾಡುವ ಅಧಿಕಾರವನ್ನು ಆಯಾ ಪಾಲಿಕೆಗಳ ಆಯುಕ್ತರಿಗೆ ನೀಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಪ್ರಕಟಿಸಿದರು.

ಮುಷ್ಕರ ವಾಪಸ್:- ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಷಡಾಕ್ಷರಿ ಮತ್ತು ಅಮೃತರಾಜ್ ಅವರು ಮುಷ್ಕರವನ್ನು ವಾಪಸ್ ಪಡೆದಿರುವುದಾಗಿ ಘೋಷಿಸಿದರಲ್ಲದೇ, ಸಚಿವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಈ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಮತ್ತು ಪೌರಾಡಳಿತ ನಿರ್ದೇಶಕರಾದ ಪ್ರಭುಲಿಂಗ ಕವಳಿಕಟ್ಟಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

ಆಂದೋಲನ ಡೆಸ್ಕ್

Recent Posts

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ. ಈ…

41 mins ago

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

2 hours ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

2 hours ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

3 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

3 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

3 hours ago