ರಾಜ್ಯ

ನೇಹಾ ಹತ್ಯೆ ಪ್ರಕರಣ: ನೇಹಾ ಫಯಾಜ್‌ಗೆ ಪ್ರಪೋಸ್‌ ಮಾಡಿದ್ದಳು; ಫಯಾಜ್‌ ತಾಯಿ ಮೊದಲ ಪ್ರತಿಕ್ರಿಯೆ

ಹುಬ್ಬಳ್ಳಿ: ಗುರುವಾರ ( ಏಪ್ರಿಲ್‌ 18 ) ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್‌ಗೆ ಚಾಕುವಿನಿಂದ ಇರಿದು ಕೊಂದ ಪ್ರಕರಣ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಫಯಾಜ್‌ಗೆ ಗಂಭೀರ ಶಿಕ್ಷೆ ವಿಧಿಸುವಂತೆ ಪ್ರತಿಭಟನೆಗಳು ನಡೆಯುತ್ತಿವೆ. ಒಂದೆಡೆ ಪ್ರಕರಣ ರಾಜಕೀಯ ಸ್ವರೂಪವನ್ನೂ ಸಹ ಪಡೆದುಕೊಳ್ಳುತ್ತಿದೆ.

ಆರಂಭದಲ್ಲಿ ಲವ್‌ ಜಿಹಾದ್‌, ಪ್ರೀತಿ ನಿರಾಕರಿಸಿದ್ದಕ್ಕೆ ನಡೆದ ಹತ್ಯೆ ಎಂದು ಹೇಳಲಾಗಿತ್ತಾದರೂ ಸದ್ಯ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಇಬ್ಬರೂ ಜತೆಗಿರುವ ಫೋಟೊಗಳು ವೈರಲ್‌ ಆಗುತ್ತಿವೆ. ಇದೇ ಸಂದರ್ಭದಲ್ಲಿ ಫಯಾಜ್‌ ತಂದೆ ಬಾಬಾಸಾಹೇಬ್‌ ಸುಬಾನಿ ಮಾತನಾಡಿ ತನ್ನ ಮಗನ ಪರ ಕ್ಷಮೆ ಕೇಳಿದ್ದರು. ಇದೀಗ ಫಯಾಜ್‌ನ ತಾಯಿ ಮುಮ್ತಾಜ್‌ ಮಾತನಾಡಿದ್ದು, ಮಗ ಮಾಡಿರುವ ತಪ್ಪಿಗೆ ಕ್ಷಮೆ ಯಾಚಿಸಿದ್ದಾರೆ ಹಾಗೂ ನೇಹಾ ತನ್ನ ಮಗನಿಗೆ ಪ್ರೇಮ ನಿವೇದನೆ ಮಾಡಿದ್ದ ವಿಚಾರವನ್ನೂ ಸಹ ಹಂಚಿಕೊಂಡಿದ್ದಾರೆ.

ʼನನ್ನ ಮಗ ಮಾಡಿರುವ ತಪ್ಪಿಗೆ ರಾಜ್ಯದ ಜನರ ಕ್ಷಮೆ ಯಾಚಿಸುತ್ತೇನೆ. ನನ್ನ ಮಗ ಫಯಾಜ್‌ಗೆ ನೇಹಾ ಪ್ರಪೋಸ್‌ ಮಾಡಿದ್ದಳು. ನನ್ನ ಬಳಿ ಇದರ ಬಗ್ಗೆ ಹೇಳಿದಾಗ ಬೇಡ ಎಂದು ಹೇಳಿದ್ದೆ. ನೇಹಾ ಬೇರೆ ಅಲ್ಲ, ನನ್ನ ಮಗಳು ಬೇರೆ ಅಲ್ಲ. ನನ್ನ ಮಗನಿಗೆ ತಕ್ಕ ಶಿಕ್ಷೆ ಆಗಬೇಕುʼ ಎಂದು ಮುಮ್ತಾಜ್‌ ಹೇಳಿದರು.

ಅಲ್ಲದೇ ʼಫಯಾಜ್‌ ಚಿಕ್ಕ ವಯಸ್ಸಿನಿಂದಲೂ ಚೆನ್ನಾಗಿ ಓದುತ್ತಿದ್ದ. ಆತನನ್ನು ಕೆಎಎಸ್‌ ಅಧಿಕಾರಿ ಮಾಡುವ ಕನಸು ಕಂಡಿದ್ದೆ. ಈ ರೀತಿ ಆಗಿದ್ದು ಬಹಳ ಸಂಕಟ ಆಗುತ್ತೆ. ನೇಹಾ ಸಹ ತುಂಬಾ ಒಳ್ಳೆ ಹುಡುಗಿ. ಫಯಾಜ್‌ – ನೇಹಾ ಮದುವೆಯಾಗಬೇಕು ಎಂದುಕೊಂಡಿದ್ದರು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕುʼ ಎಂದೂ ಸಹ ಮುಮ್ತಾಜ್‌ ಹೇಳಿಕೊಂಡರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

4 mins ago

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

38 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

3 hours ago