ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣ ರಾಜಕೀಯ ನಾಯಕರ ನಾಯಕರ ನಡುವೆ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರಲ್ಹಾದ್ ಜೋಶಿ ಅವರು ಇದೊಂದು ಲವ್ ಜಿಹಾದ್ ಎಂದು ಆರೋಪಿಸಿದ್ದರು. ಆದರೆ ಇದು ಲವ್ ಜಿಹಾದ್ ಅಲ್ಲ, ಇಬ್ಬರೂ ಸಹ ಪರಸ್ಪರ ಪ್ರೀತಿಸಿದ್ದರು, ಬಳಿಕ ಹುಡುಗಿ ದೂರ ಆಗಲು ಯತ್ನಿಸಿದ್ದಕ್ಕೆ ಕೊಲೆಯಾಗಿದ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆಯ ವಿರುದ್ಧ ಬಿನೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ನಗರದ ಎರಡೆತ್ತಿನಮಠದ ಎದುರು ನೇಹಾ ಶವವಿಟ್ಟು ನೇಹಾ ಕೊಲೆ ಆಕಸ್ಮಿಕ ಎಂದು ಹೇಳಿರುವ ಪರಮೇಶ್ವರ್ ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ಬೇಜಾವಾಬ್ದಾರಿ ಹೇಳಿಕೆ ನೀಡಿದ್ದು ಖಂಡನೀಯ. ವಿದ್ಯಾರ್ಥಿ ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.





