ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರು ಬಳಿ ನಡೆದಿದೆ.
ಕಾರಿನ ಮೇಲೆ ಕಂಟೇನರ್ ಬಿದ್ದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ. ವಿಜಯಪುರ ಮೂಲದ ಚಂದ್ರ ಯಾಗಪ್ಪ, ಗೌರಾಬಾಯಿ, ದೀಕ್ಷಾ, ಜಾನ್, ವಿಜಯಲಕ್ಷ್ಮೀ, ಆರ್ಯ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ.
ಅಪಘಾತದ ವೇಳೆ ಕಂಟೇನರ್ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೂರು ಕ್ರೇನ್‌ಗಳ ಸಹಾಯದಿಂದ ಕಂಟೇನರ್ ಮೇಲೆತ್ತಿ ಕಾರನ್ನು ಹೊರತೆಗೆಯಲಾಗಿದೆ.
ವೀಕೆಂಡ್ ಪ್ರವಾಸಕ್ಕೆ ಹೊರಟಿದ್ದ ಕುಟುಂಬ ಆರು ತಿಂಗಳ ಹಿಂದೆಯಷ್ಟೇ ಕಾರು ಖರೀದಿಸಿತ್ತು ಎಂದು ಹೇಳಲಾಗಿದ್ದು, ಈ ಸಂಬಂಧ ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.