ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಅಡ್ಜೆಸ್ಟ್ ಮೆಂಟ್ ಮತ್ತು ನೆಪೋಟಿಸಂ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ರಾಜಕೀಯ ನಾಯಕರೆಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆ. ಹಾಗಾದರೆ ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ಮುಂದುವರಿದು ಮಾತನಾಡಿದ ಪ್ರತಾಪ್ ಸಿಂಹ ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ ಅರಸು ಅವರು ದೇವರಾದರು. ಆದರೆ ಈಗ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರಿಗೂ ತಮ್ಮ ಮಕ್ಕಳದ್ದೇ ಚಿಂತೆ. ಹಾಗಾದರೆ ಬೇರೆಯವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಮತ್ತೆ ಪ್ರಶ್ನಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಂಪಿ ಟಿಕೆಟ್ ಎಲ್ಲವನ್ನೂ ಅವರವರ ಮಕ್ಕಳಿಗೆ ಕೊಟ್ಟರು. ಇದು ಮುಂದುವರಿದರೆ ಕಂಡವರ ಮಕ್ಕಳು ಹೇಗೆ ಮುಂದೆ ಬರುತ್ತಾರೆ ಎಂದು ಪ್ರಶ್ನಿಸಿದರು.
ನನ್ನನ್ನೂ ತುಂಬಾ ಜನ ಬರವಣಿಗೆ ಮುಂದುವರಿಸಿ ಎಂದು ಹೇಳುತ್ತಾರೆ. ನಾನು ಮುಂದೆ ಬರೆಯಲು ಹೋದರೆ ಮೊದಲು ಬಿಜೆಪಿಯನ್ನೇ ತೊಳೆಯುತ್ತೇನೆ. ನನಗೆ ಎಲ್ಲಾ ಪಕ್ಷಗಳ ಬಗ್ಗೆಯೂ ಗೊತ್ತು ಎಂದು ಕುಟುಂಬ ರಾಜಕಾರಣದ ವಿರುದ್ಧ ನೇರ ವಾಗ್ದಾಳಿ ನಡೆಸಿದರು.
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…
ಕುಶಾಲನಗರ: ಹಿಟ್ ಅಂಡ್ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್…
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್-ಇಸ್ರೇಲ್ ಸಂಘರ್ಷ…