ರಾಜ್ಯ

ಶೀಘ್ರದಲ್ಲಿ ಹೊಸ ಅಂಗನವಾಡಿ ಕೇಂದ್ರ ಆರಂಭ ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಾಹಿತಿ

ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಶುಕ್ರವಾರದ ವಿಧಾನಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.

ಹಿಂದುಳಿದ ವರ್ಗಗಳ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಅಂಗನವಾಡಿಯ ಪರಿಕಲ್ಪನೆ. ಇದನ್ನು ಕರ್ನಾಟಕ ಸರ್ಕಾರ ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.

ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕತೆವಿರುತ್ತದೆ. ಈ ಸಂಬಂಧ ನಾನು ಈಗಾಗಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರನ್ನು 3 ಬಾರಿ ಭೇಟಿಯಾಗಿ ಮನವಿ ಸಲ್ಲಿಸಿರುವೆ ಎಂದರು.

ಶಾಲಾ ಆವರಣದಲ್ಲಿ ನಿವೇಶನ ಕೋರಿ ಈಗಾಗಲೇ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಪ್ರಸ್ತುತ ಶಾಲಾ ಕೊಠಡಿಗಳಲ್ಲಿ ಯಾವುದೇ ತೊಂದರೆಯಿಲ್ಲದೆ ಅಂಗನವಾಡಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ 22.92 ಕೋಟಿ ಬಿಡುಗಡೆಯಾಗಿರುತ್ತದೆ. ಈಗಾಗಲೇ 337 ಅಂಗನವಾಡಿ ಕಟ್ಟಡಗಳ ಕಾಮಗಾಗಿ ಪೂರ್ಣಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಾಹಿತಿ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

9 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

9 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

9 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

10 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago