Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

Kಃ Muniyappa kharge

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್‌ ಕಾರ್ಡ್‌ಗೆ ಶಿಫ್ಟ್‌ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನು ಓದಿ: ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಎಪಿಎಲ್‌ ಕಾರ್ಡ್‌ಗೆ ಮೊದಲು 15 ಕೆಜಿ ಅಕ್ಕಿ ಕೊಡುತ್ತಿದ್ದೆವು. ಆದರೆ ಹಲವರು ಅಕ್ಕಿ ತೆಗೆದುಕೊಳ್ಳುತ್ತಿರಲಿಲ್ಲ. ಆದ್ದರಿಂದ ಒಂದು ವರ್ಷದಿಂದ ಅಕ್ಕಿ ತೆಗೆದುಕೊಳ್ಳದೇ ಇದ್ದವರನ್ನು ಸಸ್ಪೆಂಡ್‌ ಮಾಡಿದ್ದೇವೆ. ಡಿಮ್ಯಾಂಡ್‌ ಬಂದರೆ ಮತ್ತೆ ಅಕ್ಕಿ ಕೊಡುತ್ತೇವೆ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ 570 ಜನರನ್ನು ಬಂಧಿಸಲಾಗಿದೆ. ಒಟ್ಟು 29,603.15 ಕ್ವಿಂಟಾಲ್‌ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Tags:
error: Content is protected !!