Mysore
20
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖಕ್ಕೆ ಮಣೆ ಹಾಕಿದ ಕಾಂಗ್ರೆಸ್‌

ಬೆಂಗಳೂರು: ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖಕ್ಕೆ ಮಣೆ ಹಾಕುವ ಮೂಲಕ ಎರಡು ತಂಡಗಳ ನಡುವಿನ ಕಿತ್ತಾಟಕ್ಕೆ ಬ್ರೇಕ್‌ ಹಾಕಿದೆ.

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಕೆ.ವಿ. ಗೌತಮ್​ ಅವರಿಗೆ ಟಿಕೆಟ್‌ ನೀಡಿದೆ. ಇವರು ಮಾಜಿ ಮೇಯರ್​ ವಿಜಯ್​ ಕುಮಾರ್​ ಅವರ ಪುತ್ರರಾಗಿದ್ದಾರೆ.

ಈ ಮೂಲಕ ಕಾಂಗ್ರೆಸ್‌ನಲ್ಲಿನ ಮಾಜಿ ಸಭಾಪತಿ ರಮೇಶ್​ ಕುಮಾರ್ ಮತ್ತು ಸಚಿವ ಕೆ.ಹೆಚ್​ ಮುನಿಯಪ್ಪ ಎರಡೂ ಬಣದವರನ್ನು ಬಿಟ್ಟು ಮೂರನೇ ವ್ಯಕ್ತಿಗೆ ಮಣೆ ಹಾಕುವ ಮೂಲಕ ಕೋಲಾ ಕ್ಷೇತ್ರದಲ್ಲಿನ ಕಾಂಗ್ರೆಸ್‌ ಒಳ ಭೇಗುದಿಯನ್ನು ಹೈಕಮಾಂಡ್‌ ಶಮನ ಮಾಡಿದೆ. ಕೊನೆಯದಾಗಿ ಕೋಲಾರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ ರಾಜ್ಯದ ಒಟ್ಟು​​ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆಮಾಡಿದೆ.

ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಕೆ.ಹೆಚ್​ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣನಿಗೆ ಟಿಕೆಟ್‌ ನೀಡುವುದು ಖಚಿತ ಎಂಬ ಮಾಹಿತಿ ಹೊರ ಬರುತ್ತಿದ್ದಂತೆ ಮಾಜಿ ಸಭಾಪತಿ ರಮೇಶ್‌ ಕುಮಾರ್‌ ನೇತೃತ್ವದ ಬಣ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಹೇಳಿತ್ತು. ಇವೆಲ್ಲವನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಮಧ್ಯಸ್ಥಿಕೆ ವಹಿಸಿ ಎಲ್ಲರ ಮನವೊಲಿಸಿ ಮೂರನೇ ವ್ಯಕ್ತಿಯನ್ನು ಚುನಾವಣಾ ಕಣಕ್ಕಿಳಿಸಿದೆ.

Tags:
error: Content is protected !!