ರಾಜ್ಯ

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026″ನ್ನು ಉದ್ಘಾಟಿಸಿ ಮಾತನಾಡಿದರು.

ಎಫ್‌ಕೆಸಿಸಿಐನ ಅಧ್ಯಕ್ಷರಾದ ಉಮಾರೆಡ್ಡಿ ಅವರು ಉತ್ತಮ ವಾಣಿಜ್ಯೋದ್ಯಮಿಯಾಗಿ ನನಗೆ ಚಿರಪರಿಚಿತರು. ಕೃಷಿ ವಿವಿ ಹಾಗೂ ಎಫ್‌ಕೆಸಿಸಿಐನ ಸಹಭಾಗಿತ್ವದಲ್ಲಿ ಏರ್ಪಡಿಸಲಾದ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026 ರೈತರಿಗೆ ಸಹಕಾರಿಯಾಗಿದೆ. ರೈತರಿಗೆ ಉಪಯುಕ್ತವಾದ ಈ ಕಾರ್ಯಕ್ರಮದಲ್ಲಿ ಸಾವಯವ ಕೃಷಿ ಹಾಗೂ ಯಂತ್ರೋಪಕರಣಗಳ ವಸ್ತುಪ್ರದರ್ಶನ ಏರ್ಪಡಿಸಿರುವುದು ಉತ್ತಮವಾಗಿದೆ. ಆದರೆ ವಸ್ತುಪ್ರದರ್ಶನವನ್ನು ಪ್ರತ್ಯೇಕವಾಗಿ ಆಯೋಜಿಸುವುದು ಉತ್ತಮವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ರೈತರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕು ಎಂದರು.

ಭಾರತ ದೇಶ ಕೃಷಿ ಪ್ರಧಾನ ದೇಶ. ಕೃಷಿಯನ್ನು ಸುಸ್ಥಿರಗೊಳಿಸುವುದು ಹಾಗೂ ಲಾಭದಾಯಕಗೊಳಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಂದಿನ ಯುವಜನತೆ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಲಾಭದಾಯಕವಾದರೆ ಯುವಜನತೆ ಸಹಜವಾಗಿ ಕೃಷಿಯತ್ತ ಮುಖಮಾಡುತ್ತಾರೆ. ಸರ್ಕಾರ ಕೃಷಿಯನ್ನು ಲಾಭದಾಯಕಗೊಳಿಸಲು ಹಲವು ಯೋಜನೆಗಳನ್ನು ರೂಪಿಸಿ, ಈ ಉದ್ದೇಶಕ್ಕೆ ಕೈಗಾರಿಕೆಗಳೂ ಕೈಜೋಡಿಸಬೇಕು ಎಂದರು.

ಮಾಹಿತಿ ತಂತ್ರಜ್ಞಾನದಲ್ಲಿ ಬೆಂಗಳೂರು ರಾಜಧಾನಿಯಾದಂತೆ, ಕೃಷಿ ತಂತ್ರಜ್ಞಾನದಲ್ಲಿಯೂ ಬೆಂಗಳೂರು ರಾಜಧಾನಿಯಾಗಬೇಕು. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೃತಕ ಬುದ್ದಿಮತ್ತೆ ಸೇರಿದಂತೆ ಎಲ್ಲ ಕ್ಷೇತ್ರಗಳ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಒಣಭೂಮಿಯ ಪ್ರಮಾಣ ಹೆಚ್ಚಿದ್ದು, ಸಣ್ಣಹಿಡುವಳಿದಾರರಿಗೆ ಕೃಷಿಯನ್ನು ಲಾಭದಾಯಕಗೊಳಿಸಬೇಕಿದೆ. ಆದ್ದರಿಂದ ನಮ್ಮ ಸರ್ಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿತು. ಹೆಚ್ಚು ಒಣಭೂಮಿಯಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಬಿಜೆಪಿಯವರು ಅಧಿಕಾರಕ್ಕೆ ಬಂದಾಗ ಕೃಷಿಭಾಗ್ಯವನ್ನು ಸ್ಥಗಿತಗೊಳಿಸಿದ್ದು, ನಮ್ಮ ಸರ್ಕಾರ ಈ ಯೋಜನೆಗೆ ಮರುಜಾರಿಗೊಳಿಸಿದೆ. ಸುಮಾರು 83 ಲಕ್ಷ ರೈತರಿಗೆ 70 ಸಾವಿರ ಕೋಟಿ ರೂ.ಗಳ ಕೃಷಿಸಾಲವನ್ನು ನೀಡಲಾಗಿದೆ. ಕಳೆದ ವರ್ಷ 8 ಸಾವಿರ ಕೋಟಿ ಗಳನ್ನು ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳಿಗೆ ಇಡಲಾಗಿತ್ತು. ಬಂಡವಾಳ ಹೂಡಿಕೆ ಅಧಿಕಗೊಳ್ಳಬೇಕು. ಕೈಗಾರಿಕೆ, ಗ್ರಾಮೀಣಾಭಿವೃದ್ಧಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದ್ದು, ಕೃಷಿ ಕ್ಷೇತ್ರದಲ್ಲಿಯೂ ಹೂಡಿಕೆಗಳು ಹೆಚ್ಚಾಗಬೇಕು. ಆಗ ಮಾತ್ರ ಕೃಷಿ ಲಾಭದಾಯಕವಾಗಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago