ಬೆಂಗಳೂರು : ಜುಲೈ ೧ ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ. ಇದರ ಜೊತೆಗೆ ಹೊಸ ಕ್ರಿಮಿನಲ್ ಕಾನೂನುಗಳ ಪ್ರಮುಖ ಲಕ್ಷಣಗಳನ್ನ ಮಹಿಳೆಯರಿಗೆ, ಯುವಕರಿಗೆ, ವಿದ್ಯಾರ್ಥಿಗಳಿಗೆ ಜೊತೆಗೆ ಹಿರಿಯ ನಾಗರೀಕ ಮತ್ತು ಗಣ್ಯ ವ್ಯಕ್ತಿಗಳಿಗೆ ತಿಳಿಸಲು ವಿಶೇಷ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ.
ಇನ್ನು ಬ್ರಿಟಿಷರ ಕಾಲದ ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್ ಎವಿಡೆನ್ಸ್ ಆಕ್ಟ್ -ಭಾರತೀಯ ಸಾಕ್ಷ್ಯ ಅಧಿನಿಯಮ ಅನ್ನು ಬದಲಿಸುತ್ತದೆ. ಈಗಿರುವ ಕಾಯಿದೆಗಳಿಗೆ ಹೋಲಿಸಿದರೆ ಈ ಮೂರು ಹೊಸ ಕಾನೂನುಗಳಲ್ಲಿ ಹಲವು ವಿನೂತ ಉದ್ದೇಶಗಳನ್ನ ಹೊಂದಿದೆ.
ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್ ಎವಿಡೆನ್ಸ್ ಆಕ್ಟ್ -ಭಾರತೀಯ ಸಾಕ್ಷ್ಯ ಅಧಿನಿಯಮ ೨೦೨೩ ಬಿಎಸ್ ಎ ಕಾಲಮಿತಿಯೊಳಗೆ ತನಿಕೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.
ಇನ್ನು ಈ ಮೂರು ಕ್ರಿಮಿನಲ್ ಕಾನೂನುಗಳನ್ನ ಕಳೆದ ವರ್ಷವೇ ಸಂಸತ್ತು ಅಂಗೀಕಾರ ಮಾಡಿತ್ತು. ಮತ್ತು ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆಯೂ ಸಹ ಪಡೆಯಲಾಗಿತ್ತು. ಆದರೆ ಅವುಗಳು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ ೨೫ ರಂದು ಮೂರು ಕಾನೂನುಗಳು ಜುಲೈ ೧ ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…