ರಾಜ್ಯ

ಜನಜಂಗುಳಿ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಜನಜಂಗುಳಿ ನಿಯಂತ್ರಣಕ್ಕೆ ಈ ಮಾರ್ಗಸೂಚಿ ಜಾರಿಗೆ ತರಲಾಗಿದ್ದು, ಯಾವುದೇ ಬಹಳಷ್ಟು ಸಂಖ್ಯೆಯಲ್ಲಿ ಜನ ಸೇರುವ ಸಭೆ ಸಮಾರಂಭಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗಲಿದೆ.
ಹಬ್ಬಗಳು, ಪ್ರತಿಭಟನೆಗಳು, ಮೆರವಣಿಗೆಗಳು ಮತ್ತು ಕ್ರೀಡಾ ಕೂಟಗಳಂತಹ ಬೃಹತ್ ಜನ ಸಮುದಾಯ ಸೇರುವ ಯಾವುದೇ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮಾರ್ಗಸೂಚಿ ಜಾರಿಗೆ ತರಲಾಗಿದೆ.

ಮಾರ್ಗಸೂಚಿಯಲ್ಲೇನಿದೆ?: ಸಾರ್ವಜನಿಕ ಕಾರ್ಯಕ್ರಮಕ್ಕೂ ಮುನ್ನ ಸ್ಥಳದ ಸಂಪೂರ್ಣ ಪರಿಶೀಲನೆ ಮತ್ತು ಕಾರ್ಯಕ್ರಮ ಆಯೋಜಕರ ಸಹಯೋಗದೊಂದಿಗೆ ವಿವರವಾದ ಯೋಜನೆ ರಚಿಸುವುದು ಈಗ ಕಡ್ಡಾಯ. ಕಾರ್ಯಕ್ರಮ ನಡೆಯುವ ಸ್ಥಳದ ಸಾಮರ್ಥ್ಯ, ತುರ್ತು ನಿರ್ಗಮನ ಮಾರ್ಗಗಳ ಲಭ್ಯತೆ ಮತ್ತು ತಂತ್ರಜ್ಞಾನದ ಬಳಕೆಯ ಸಾಧ್ಯತೆಗಳನ್ನು ಪರಿಶೀಲಿಸಲೇಬೇಕು. ಜನಸಂದಣಿ ನಿರ್ವಹಣೆಗೆ ಪೊಲೀಸರ ಹೊಣೆಗಾರಿಕೆಗಳು, ಟ್ರಾಫಿಕ್ ನಿಯಂತ್ರಣ, ವೈದ್ಯಕೀಯ ನೆರವು ಮತ್ತು ಟಿಕೆಟ್ ವ್ಯವಸ್ಥೆಗಳನ್ನು ಮಾಡಲೇಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

೧. ಸಾರ್ವಜನಿಕರ ಪ್ರವೇಶ ದ್ವಾರಗಳಲ್ಲಿ ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಬೇಕು.
೨. ಜನಸಂದಣಿಯನ್ನು ಸುಗಮಗೊಳಿಸಲು ಕ್ಯೂ ಆರ್ ಕೋಡ್ ಅಥವಾ ಬಯೋಮೆಟ್ರಿಕ್ ತಂತ್ರಜ್ಞಾನದ ಬಳಕೆ ಮತ್ತು ವಿಭಿನ್ನ ವರ್ಗಗಳಿಗೆ ಪ್ರತ್ಯೇಕ ಪ್ರವೇಶ ದ್ವಾರಗಳನ್ನು ಒದಗಿಸಬೇಕು.
೩. ತುರ್ತು ನಿರ್ಗಮನ ಮಾರ್ಗಗಳನ್ನು ಸ್ಪಷ್ಟವಾಗಿ ಗುರುತಿಸಬೇಕು ಮತ್ತು ಯಾವುದೇ ಸಂದರ್ಭದಲ್ಲಿಯೂ ಲೌಡ್‌ಸ್ಪೀಕರ್‌ಗಳ ಮೂಲಕ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡುವ ವ್ಯವಸ್ಥೆ ಇರಬೇಕು.
೪. ತುರ್ತು ವಾಹನಗಳಾದ ಅಂಬುಲೆನ್ಸ್‌ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವೈದ್ಯಕೀಯ ನೆರವಿನ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಬೇಕು.
೫. ಪ್ರತಿಭಟನೆ ಅಥವಾ ಹವಾಮಾನ ದುರಂತಗಳಂತಹ ಅನಿರೀಕ್ಷಿತ ಪರಿಸ್ಥಿತಿಗಳಿಗೆ ತಯಾರಿ ನಡೆಸಲು ಸಿಮ್ಯುಲೇಷನ್ ಡ್ರಿಲ್‌ಗಳನ್ನು ನಡೆಸುವ ಮೂಲಕ ರಕ್ಷಣಾ ತಂಡಗಳ ಜವಾಬ್ದಾರಿಗಳನ್ನು ಮೊದಲೇ ಗುರುತಿಸಬೇಕು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

32 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

34 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

37 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

40 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

45 mins ago