ರಾಜ್ಯ

ಬಿಡದಿಯಲ್ಲಿ ನೂತನ ಐಟಿ ಸಿಟಿ ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಡದಿಯಲ್ಲಿ ಐಟಿ ನಗರ ನಿರ್ಮಿಸುವ ಆಲೋಚನೆಯಿದ್ದು, ಬೆಂಗಳೂರಿನಲ್ಲಿ ಬಿಲಿಯನ್‌ ಡಾಲರ್‌ಗಟ್ಟಲೇ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ ಎಂದು ಹೇಳಿದರು.

ಇದನ್ನು ಓದಿ: ಡಿಜಿಟಲ್‌ ಅರೆಸ್ಟ್‌ ವಂಚನೆ ಪ್ರಕರಣ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಇನ್ನು ಬೆಂಗಳೂರಿನಲ್ಲಿ ಟೆಕ್‌ ಸಮ್ಮಿಟ್‌ ನಡೆಯುತ್ತಿದ್ದು, ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ. ನಾವು ಎಷ್ಟು ಸಾಧ್ಯವೋ ಅಷ್ಟು ಅವರೆಲ್ಲರ ಬೆಂಬಲಕ್ಕೆ ನಿಂತಿದ್ದೇವೆ. 60 ದೇಶಗಳ ಪ್ರತಿನಿಧಿಗಳು, ದೇಶದ ಎಲ್ಲಾ ರಾಜ್ಯಗಳ ಪ್ರಮುಖರು ಸುಮಾರು 50 ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. 1500 ದೊಡ್ಡ ಕಂಪನಿಗಳು ಭಾಗವಹಿಸುತ್ತಿವೆ. ಇವರುಗಳು ಉದ್ಯೋಗ ನೀಡಬೇಕು. ಸಂಪಾದನೆ ಮಾಡಬೇಕು. ಅದಕ್ಕೆ ನಮ್ಮ ಪ್ರೋತ್ಸಾಹ ಎಂದು ಹೇಳಿದರು.

ಪ್ರೋತ್ಸಾಹ ನೀಡಿದರೆ ಇಲ್ಲಿನ ಪ್ರತಿಭೆಗಳು, ಹೊಸ ಆವಿಷ್ಕಾರ, ತಂತ್ರಜ್ಞಾನ, ಸ್ಟಾರ್ಟ್‌ ಅಪ್‌ಗಳು ಕರ್ನಾಟಕವನ್ನು ಹೊಸ ದಿಕ್ಕಿನೆಡೆಗೆ ಕೊಂಡೊಯ್ಯಲಿವೆ. ಹೊಸ ಆಲೋಚನಗೆಳು ಬಂದರೆ ಸ್ಟಾರ್ಟ್‌ ಅಪ್‌ ಮೂಲಕ ಬೆಳೆಯಲು ಸರ್ಕಾರ ಅವಕಾಶ ಕಲ್ಪಿಸಿ ನಿಮ್ಮ ಜೊತೆಗಿದೆ ಎಂದು ಹೇಳುತ್ತಿರುತ್ತೇನೆ ಎಂದು ಅಭಿಪ್ರಾಯ ಪಟ್ಟರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

48 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

50 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

52 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

55 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

60 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago