santhosh lad
ಬೆಂಗಳೂರು/ವಿಜಯಪುರ : ಕಾರ್ಮಿಕ ಇಲಾಖೆಯ ಹೊಸ ಯೋಜನೆಗಳನ್ನು ಎಲ್ಲಾ ರೀತಿಯ ಕಾರ್ಮಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದರು.
ಅವರಿಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರಾತಾ ಮಂಡಳಿ, ಸಾರಿಗೆ ಇಲಾಖೆ ಇವರ ಸಂಯುಕ್ತಆಶ್ರಯದಲ್ಲಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಲಾಖೆಯಡಿ ಸರ್ಕಾರ ಸಾಂಸ್ಕೃತಿಕ ಕಾರ್ಮಿಕರ ಕಾರ್ಯಕರ್ತರ ಕಾಯಿದೆಗೆ ಉದ್ದೇಶಿಸಿದ್ದು, ಅದಕ್ಕಾಗಿ ನಿಯಮಗಳನ್ನು ಸಿದ್ಧಪಡಿಸುವ ಕೆಲಸ ಇಲಾಖೆಯಡಿ ಮಾಡಲಾಗುತ್ತಿದೆ.ಆಶಾದೀಪ ಯೋಜನೆಯಡಿ
ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಯುವಕರಿಗೆ ಸಂಸ್ಥೆಗಳು ಕೆಲಸ ನೀಡಿದಲ್ಲಿ ಅಥವ ಅಪ್ರೆಂಟೈಸರ್ ನೀಡದಲ್ಲಿ ತಿಂಗಳಿಗೆ ಒಬ್ಬ ಅಭ್ಯರ್ಥಿಗೆ ಸುಮಾರು 7ಸಾವಿರ ರೂಪಾಯಿವರೆಗೆ ಮ್ಯಾನೇಜ್ ಮೆಂಟಿಗೆ ರಿಅಂಬ್ರೈಸ್ ಮಾಡಲಾಗುವುದು ಎಂದು ಸಚಿವ ಲಾಡ್ ಮಾಹಿತಿ ನೀಡಿದರು.
ಈ ಕಾಂಗ್ರೆಸ್ ಸರ್ಕಾರ ಬಂದಮೇಲೆ ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ಅನುಕೂಲ ಕಲ್ಪಿಸಲೆಂದು ತಾವು ಕಾರ್ಮಿಕ ಸಚಿವರಾದ ಬಳಿಕ ಹೊಸಹೊಸ ಯೋಜನೆಗಳನ್ನು ತರಲಾಗಿದೆ. ರಾಜ್ಯದಲ್ಲಿ ಪ್ರಸಕ್ತ 91 ವರ್ಗದ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾರ್ಮಿಕರನ್ನು ಗುರುತಿಸಿ ಕಾರ್ಮಿಕರ ದತ್ತಾಂಶಗಳನ್ನು ಸಂಗ್ರಹಿಸುವ ಕೆಲಸ ಮಾಡಲಾಗುತ್ತಿದೆ.ಪ್ರಾರಂಭಿಕವಾಗಿ ಹೊಸಹೋಸ ಯೋಜನೆಗಳನ್ನು ಕಾರ್ಮಿಕರಿಗೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆಯೂ ಇದೆ.
ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಹೊಸ ಕಾರ್ಮಿಕ ಯೋಜನೆಗಳ ಕಾರ್ಮಿಕರಿಗೆ ಅಪಘಾತ ವಿಮೆ, ಆಸ್ಪತ್ರೆ ವೆಚ್ಚಕ್ಕೆ ಸಹಾಯ, ಅಪಘಾತ ಹಾಗೂ ಸಹಜ ಮರಣಕ್ಕೆ ಸಹಾಯ, ಮೃತ ಕಾರ್ಮಿಕ ಕುಟುಂಬಕ್ಕೆ ಸಹಾಯ ಮಾಡಲಾಗುತ್ತಿದೆ.ಸಾರಿಗೆ ಮತ್ತು ಅದಕ್ಕೆ ಸಂಬಂಧಿಸಿದ ಕಾಮಿಕರಿಗೆ ಯೋಜನೆ ಮತ್ತು ಮಂಡಳಿ ಜಾರಿಗೆ ತರಲಾಗಿದೆ.ಸುಮಾರು 25ಲಕ್ಷ ಮಂದಿ ಇದಕ್ಕೆ ಸಂಬತಂಧಿಸಿದ ಕಾರ್ಮಿಕರಿದ್ದಾರೆಂದು ಗುರುತಿಸಲಾಗಿದೆ. ಗಿಗ್ ವರ್ಕರ್ಸ್ಗಾಗಿ ಪ್ರತ್ಯೇಕ ಕಾಯಿದೆ ಜಾರಿಗೆ ತರಲಾಗಿದೆ ಎಂದರು .
ಆಡಳಿತರೂಢ ಕಾಂಗ್ರೆಸ್ ಸರ್ಕಾರ ನೀಡಿದ ಪಂಚಯೋಜನೆಗಳನ್ನು ಟೀಕಿಸುತ್ತಿರುವ ಬಿಜೆಪಿ ಕಾರ್ಮಿಕ ವರ್ಗಕ್ಕೇನೂ ಮಾಡದೆ ಇರೋದು ಬೇಸರದ ಸಂಗತಿ. ಕಾರ್ಮಿಕರ ಪರವಾಗಿ ಕಾಂಗ್ರೆಸ್ ಸರ್ಕಾರ ಸದಾ ಐದ್ಧಾವಿದೆ ಎಂದು ಸಂತೋಷ್ ಲಾಡ್ ಸ್ಪಷ್ಟಪಡಿಸಿದರು.
ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…
ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…
ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…