ರಾಜ್ಯ

ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಕಲ್ಪಿಸುವ ಹೊಸ ಕಲಿಕಾ ಯೋಜನೆಗೆ ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್‌ ಲರ್ನಿಂಗ್‌ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹಾಗೂ ಚಟುವಟಿಕೆಯ ಮೂಲಕ ಕಲಿಕೆಗೆ ಅನುವು ಮಾಡಿಕೊಡುವ ಯೋಜನೆಯನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ಜವಾಹರ್‌ಲಾಲ್‌ ನೆಹರು ತಾರಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ, ” ರಾಷ್ಟ್ರೀಯ ವಿಜ್ಞಾನ ದಿನ” ಮತ್ತು ಬೆಂಗಳೂರು ಸ್ಮಾರ್ಟ್‌ ಸಿಟಿ ಲಿಮಿಟೆಡ್‌ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಯು ಆರ್‌ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಈ ವಿಷಯ ತಿಳಿಸಿದರು.

ದೇಶ ಹಾಗೂ ರಾಜ್ಯಗಳ ಪ್ರಗತಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅಪಾರವಾಗಿದೆ. ಪ್ರತಿವರ್ಷ ಫೆಬ್ರವರಿ 28 ರಂದು ಸರ್‌ ಸಿ.ವಿ ರಾಮನ್‌ ಅವರ “ರಾಮನ್‌ ಪರಿಣಾಮ” ಆವಿಷ್ಕಾರದ ಸ್ಮರಣಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿಜ್ಞಾನವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ದು – ಜನರನ್ನು ವಿಜ್ಞಾನದ ಕಡೆಗೆ ಕರೆದೊಯ್ಯುವುದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ದೂರದೃಷ್ಟಿಯಾಗಿದೆ. ಕಳೆದ ಎರಡು ವರ್ಷಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮೂಲಕ ಸೃಜನಶೀಲತೆ, ಸುಸ್ಥಿರತೆ ಮತ್ತು ವೈಜ್ಞಾನಿಕತೆಯನ್ನು ಸಾರುವಂತಹ ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.

ಕರ್ನಾಟಕ ರಾಜ್ಯವನ್ನು ಸಂಶೋಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದಕ್ಕೆ ನಮ್ಮ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಬಹಳಷ್ಟು ಸಹಕಾರ ನೀಡುತ್ತಿದ್ದಾರೆ. ಸಂಶೋದನೆ ಮತ್ತು ಅಭಿವೃದ್ದಿಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ರಿಸರ್ಚ್‌ ಫೌಂಡೇಶನ್‌ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಖಗೋಳಶಾಸ್ತ್ರದ ಬಗ್ಗೆ ಆಸಕ್ತಿ ಬೆಳೆಸಲು ಕಳೆದ ಬಜೆಟ್‌ನಲ್ಲಿ ಟೆಲಿಸ್ಕೋಪ್‌ ವಿತರಿಸಲು ಅಗತ್ಯ ಅನುದಾನ ನೀಡಲಾಗಿತ್ತು. ಇಂದು ವಸತಿ ಶಾಲೆಗಳಿಗೆ ಟೆಲಿಸ್ಕೋಪ್‌ ಕೂಡಾ ಹಸ್ತಾಂತರಿಸಲಾಗುತ್ತಿದೆ.

ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಕಲಿಯುವ ನಿಟ್ಟಿನಲ್ಲಿ ಪಾಠದ ಜೊತೆಯಲ್ಲೇ ಹೆಚ್ಚಿನದ್ದನ್ನು ಮಾಡುವುದು ಅಗತ್ಯ. ವಿದ್ಯಾರ್ಥಿಗಳು ಹೆಚ್ಚಿನದ್ದನ್ನ ಓದುವಂತೆ, ಬರೆಯುವಂತೆ, ಸಂಶೋಧಿಸುವಂತೆ, ಪ್ರಾಯೋಗಿಕವಾಗಿ ಚರ್ಚಿಸುವಂತೆ, ಸಮಸ್ಯೆಗಳನ್ನು ಪರಿಹರಿಸುವಂತೆ ಪ್ರೇರೇಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಯೋಗಶೀಲತೆಗೆ ಅನುವು ಮಾಡಿಕೊಡುವಂತಹ ಹೊಸ ಯೋಜನೆ ರೂಪಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಚಿಂತನೆ ನಡೆಸುತ್ತಿದೆ. ವಿಜ್ಞಾನ, ತಂತ್ರಜ್ಞಾನ, ರೊಬೊಟಿಕ್ಸ್‌, ಪರಿಸರ ಮತ್ತು ಪರಿಸರ ವಿಜ್ಞಾನ, ಖಗೋಳಶಾಸ್ತ್ರ ಮತ್ತು ಗಣಿತದ ಪರಿಕಲ್ಪನೆಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಉಪಕರಣಗಳು ಮತ್ತು ಸಲಕರಣೆಗಳೊಂದಿಗೆ ಕೆಲಸ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದು ನಮ್ಮ ಉದ್ದೇಶವಾಗಿದೆ. ಈ ಮೂಲಕ ನಮ್ಮ ವಿದ್ಯಾರ್ಥಿಗಳು ಎಐ ಮತ್ತು ಮೆಷಿನ್‌ ಲರ್ನಿಂಗ್‌ ನಂತಹ ಕ್ಷೇತ್ರಗಳಲ್ಲೂ ಸಾಧನೆ ಮಾಡುವ ನಿಟ್ಟಿನಲ್ಲಿ ಪ್ರೇರೇಪಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್‌ ಸಭಾಪತಿಗಳಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಯು.ಟಿ ಖಾದರ್‌, ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್‌ ಕಿರಣ್‌ ಕುಮಾರ್‌, ಸಚಿವರಾದ ಕೃಷ್ಣ ಭೈರೇಗೌಡ, ಪ್ರಿಯಾಂಕಾ ಖರ್ಗೆ, ಎಂ.ಸಿ ಸುಧಾಕರ್‌ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago