ರಾಮನಗರ: ಚನ್ನಪಟ್ಟಣದ ಅಭಿವೃದ್ಧಿಗಾಗಿ ವಿವಿಧ ಇಲಾಖೆಯಡಿ ಸುಮಾರು 300 ಕೋಟಿ ರೂ.ಹಣವನ್ನು ಮಂಜೂರು ಮಾಡಿಸಿದ್ದೇವೆ. ಇಂದು ಮಾಕಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ 2.16 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರಕ್ಕೆ ಹೊಸ ರೂಪ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಚನ್ನಪಟ್ಟಣದ ಮಾಕಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಪಿ.ಆರ್.ಇ ಮತ್ತು ಬೃಹತ್ ಹಾಗೂ ಮಧ್ಯಮ ನೀರಾವರಿ ಇಲಾಖೆಯ ಅನುದಾನದ ಅಡಿಯಲ್ಲಿ ಸಿ.ಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆಯನ್ನು ನೆರವೇರಿಸಿದ ಸಂದರ್ಭದಲ್ಲಿ ಮಾತನಾಡಿದರು.
ಸರ್ಕಾರದ ವತಿಯಿಂದ 78 ಮನೆಗಳನ್ನ ಮಂಜೂರು ಮಾಡಿದ್ದೇವೆ. ಈ ಕೆಲಸವನ್ನು ಮಾಡಿಸುವ ಜವಾಬ್ದಾರಿಯನ್ನು ಮಾಕಳಿ ಗ್ರಾಮ ಪಂಚಾಯಿತಿಗೆ ವಹಿಸಿದ್ದೇವೆ. ಅಲ್ಲದೇ ಮಾಕಳಿ ಗ್ರಾಮದಲ್ಲಿ ಸಿಎಸ್ಆರ್ ಅನುದಾನದಡಿ ಗುಣಮಟ್ಟದ ಶಿಕ್ಷಣ ನೀಡುವ ಶಾಲೆಯನ್ನು ನಿರ್ಮಿಸಲು ಜಾಗವನ್ನು ಸಹ ಗುರುತಿಸಲಾಗಿದೆ. ನಮ್ಮ ಸರ್ಕಾರ ನಿಮ್ಮ ಸೇವೆಗೆ ಸದಾ ಸಿದ್ಧವಾಗಿದ್ದು, ಚನ್ನಪಟ್ಟಣ ತಾಲೂಕಿಗೆ ಹೊಸ ರೂಪ ನೀಡಲು ನಾವು ಬದ್ಧರಿದ್ದೇವೆ, ನೀವೆಲ್ಲಾ ಸಹಕಾರ ಕೊಡಬೇಕು ಎಂದು ಹೇಳಿದರು.