Mysore
19
overcast clouds
Light
Dark

ಮುಂದಿನ 15 ದಿನಗಳಲ್ಲಿ ಹೊಸ ಮೆಮು ರೈಲು ಸಂಚಾರ ಆರಂಭ: ಕೇಂದ್ರ ಸಚಿವ ವಿ.ಸೋಮಣ್ಣ

ತುಮಕೂರು: ತುಮಕೂರು ರೈಲು ನಿಲ್ದಾಣದಿಂದ ಮುಂದಿನ ಹದಿನೈದು ದಿನಗಳಲ್ಲಿ ಹೊಸದಾಗಿ ಮೆಮು ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಿಹಿ ಸುದ್ದಿ ನೀಡಿದ್ದು, ಮೆಮು ರೈಲು ಸಂಚಾರ ಆರಂಭದ ಬಗ್ಗೆ ವಿವರ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ವಿ.ಸೋಮಣ್ಣ ಅವರು, ರಾಜ್ಯದಲ್ಲಿ ಹೊಸದಾಗಿ ಮೂರು ಮೆಮು ರೈಲು ಆರಂಭವಾಗಲಿದ್ದು, ಇದರಲ್ಲಿ ಒಂದು ತುಮಕೂರು ನಿಲ್ದಾಣದಿಂದ ಶುರುವಾಗಲಿದೆ. ತುಮಕೂರಿನಿಂದ ಬೆಳಿಗ್ಗೆ 9 ಗಂಟೆಗೆ ಹೊರಟು 10ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣ ತಲುಪಲಿದೆ. ಬಳಿಕ ಸಂಜೆ 6 ಗಂಟೆಗೆ ಯಶವಂತಪುರದಿಂದ ಹೊರಟು ಸಂಜೆ 7 ಗಂಟೆಗೆ ತುಮಕೂರಿಗೆ ಬರಲಿದೆ. ಇದರಲ್ಲಿ 1500 ಜನ ಪ್ರಯಾಣಿಸಬಹುದು ಎಂದು ಮಾಹಿತಿ ನೀಡಿದರು.

ಮುಂದಿನ 30 ವರ್ಷಗಳ ಬೆಳವಣಿಗೆ ದೃಷ್ಟಿಯಲ್ಲಿ ಇಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ. ಇದರಿಂದ ರೈಲುಗಳ ಓಡಾಟ ಸುಲಭವಾಗುತ್ತದೆ ಎಂದು ವಿವರ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಅಮೃತ್‌ ಭಾರತ್‌ ಯೋಜನೆಯಡಿ ರಾಜ್ಯದ 61 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಎಲ್ಲಾ ನಿಲ್ದಾಣಗಳಿಗೂ ಹಣ ಬಿಡುಗಡೆ ಮಾಡಿ ಮತ್ತಷ್ಟು ಅಭಿವೃದ್ಧಿ ಮಾಡಲಾಗುತ್ತದೆ. ಪ್ರಯಾಣಿಕರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.