ತುಮಕೂರು: ತುಮಕೂರು ರೈಲು ನಿಲ್ದಾಣದಿಂದ ಮುಂದಿನ ಹದಿನೈದು ದಿನಗಳಲ್ಲಿ ಹೊಸದಾಗಿ ಮೆಮು ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಿಹಿ ಸುದ್ದಿ ನೀಡಿದ್ದು, ಮೆಮು ರೈಲು ಸಂಚಾರ ಆರಂಭದ ಬಗ್ಗೆ ವಿವರ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ವಿ.ಸೋಮಣ್ಣ ಅವರು, ರಾಜ್ಯದಲ್ಲಿ ಹೊಸದಾಗಿ ಮೂರು ಮೆಮು ರೈಲು ಆರಂಭವಾಗಲಿದ್ದು, ಇದರಲ್ಲಿ ಒಂದು ತುಮಕೂರು ನಿಲ್ದಾಣದಿಂದ ಶುರುವಾಗಲಿದೆ. ತುಮಕೂರಿನಿಂದ ಬೆಳಿಗ್ಗೆ 9 ಗಂಟೆಗೆ ಹೊರಟು 10ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣ ತಲುಪಲಿದೆ. ಬಳಿಕ ಸಂಜೆ 6 ಗಂಟೆಗೆ ಯಶವಂತಪುರದಿಂದ ಹೊರಟು ಸಂಜೆ 7 ಗಂಟೆಗೆ ತುಮಕೂರಿಗೆ ಬರಲಿದೆ. ಇದರಲ್ಲಿ 1500 ಜನ ಪ್ರಯಾಣಿಸಬಹುದು ಎಂದು ಮಾಹಿತಿ ನೀಡಿದರು.
ಮುಂದಿನ 30 ವರ್ಷಗಳ ಬೆಳವಣಿಗೆ ದೃಷ್ಟಿಯಲ್ಲಿ ಇಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ. ಇದರಿಂದ ರೈಲುಗಳ ಓಡಾಟ ಸುಲಭವಾಗುತ್ತದೆ ಎಂದು ವಿವರ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಅಮೃತ್ ಭಾರತ್ ಯೋಜನೆಯಡಿ ರಾಜ್ಯದ 61 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಎಲ್ಲಾ ನಿಲ್ದಾಣಗಳಿಗೂ ಹಣ ಬಿಡುಗಡೆ ಮಾಡಿ ಮತ್ತಷ್ಟು ಅಭಿವೃದ್ಧಿ ಮಾಡಲಾಗುತ್ತದೆ. ಪ್ರಯಾಣಿಕರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…