ರಾಜ್ಯ

ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ೨೪ ಗಂಟೆ ಅವಧಿಯಲ್ಲಿ ೪೮೬ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದೆ. ಅಲ್ಲದೆ ಕ್ಯಾನ್ಸರ್‌, ಹೃದಯ ಸಮಸ್ಯೆ, ಥೈರಾಯ್ಡ್‌ , ಹೈಪರ್‌ ಟೆನ್ಷನ್‌ , ಬಿಪಿ, ಹಾಗೂ ಶುಗರ್‌ ಸಮಸ್ಯೆಯಿಂದ ಬಳಲುತ್ತಿರುವವರ ಜೀವ ನುಂಗಲು ಹೆಮ್ಮಾರಿ ಹೊಂಚು ಹಾಕುತ್ತಿದೆ. ಈಗಾಗಲೇ ಡೆಂಗ್ಯೂ ಜ್ವರ ಬಂದಿರುವವರಿಗೆ ಮತ್ತೆ ಸೊಳ್ಳೆ ಕಚ್ಚಿದರೆ ಅದರ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಡೆಂಗ್ಯೂ ನಿಯಂತ್ರಣಕ್ಕೆ  ಸರ್ಕಾರಿ  ಆಸ್ಪತ್ರೆಗಳಲ್ಲಿ ಹೊಸ ಪ್ಲಾನ್‌ ಮಾಡಿಕೊಳ್ಳಲಾಗಿದೆ.

ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳು ಸೊಳ್ಳೆ ಪರದೆಯ ಮೊರೆ ಹೋಗಿದ್ದು, ಡೆಂಗ್ಯೂ ರೋಗಿಗಳ ಸೋಂಕಿನ ತೀವ್ರತೆ ತಡೆಯಲು ಸೊಳ್ಳೆ ಪರದೆ ಬಳಕೆ ಮಾಡುತ್ತಿವೆ. ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರಿಗೆ ಗುಣಮುಖರಾಗುವ ಹೊತ್ತಿನಲ್ಲಿ ಮತ್ತೆ ಡೆಂಗ್ಯೂ ಸೊಳ್ಳೆ ಕಚ್ಚಿದರೆ ಸೋಂಕು ತೀವ್ರಗೊಳ್ಳುವ ಸಾಧ್ಯತೆ ಇದ್ದು, ಅಪಾಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ಈಗಾಗಿ ಈ ಮಾಸ್ಟರ್‌ ಪ್ಲಾನ್‌ ಅನ್ನು ಮಾಡಿಕೊಂಡಿವೆ.

ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಡೆಂಗ್ಯೂ ಆಸ್ಪತ್ರೆಗಳಿಂದ ಹರಡದಂತೆ ಹಾಗೂ ಸೊಳ್ಳೆಗಳು ಬರದಂತೆ ತಡೆಯಲು  ವಾರ್ಡ್‌ಗಳಿಗೆ ಹಾಗೂ ಜ್ವರದ ಪ್ರಕರಣಗಳಿಂದ ದಾಖಲಾದ ರೋಗಿಗಳಿಗೆ ಬಡ್‌ ಜೊತೆಗೆ ಸೊಳ್ಳೆ ಪರದೆ ಹಾಕಲಾಗಿದೆ. ಅಲ್ಲದೆ ಆಸ್ಪತ್ರೆಗೆ ಬರುವ ಇತರೆ ರೋಗಿಗಳು ಹಾಗೂ ಜನರಿಗೂ ಡೆಂಗ್ಯೂ ಹರಡದಂತೆ ರಕ್ಷಣೆ ನೀಡಲು ಸೊಳ್ಳೆ ಔಷಧ ನಿಯಂತ್ರಕ ರಿಪ್ಲೀಕೆಂಟ್‌ ಅಳವಡಿಸಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

2 hours ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

2 hours ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

2 hours ago

ಜಾತಿವಾದಿ ಮನಸ್ಸುಗಳಿಗೆ ಸಮಾನತೆಯ ದರ್ಶನ

ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…

2 hours ago

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago