Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ: ಸಚಿವ ಕೆ.ಎಚ್.ಮುನಿಯಪ್ಪ

ನವದೆಹಲಿ: ಸಿಎಂ ಸಿದ್ದರಾಮಯ್ಯರ ಜೊತೆ ಚರ್ಚಿಸಿ ಅಕ್ಕಿ ಪೂರೈಕೆಗೆ ಕೇಂದ್ರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಅಕ್ಕಿ ನೀಡಲು ನಿರ್ಧಾರ ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಜೊತೆಗೆ ಚರ್ಚೆ ನಡೆಸಿದ್ದು, ರಾಜ್ಯಕ್ಕೂ ಅಕ್ಕಿ ನೀಡಲು ಒಪ್ಪಿಗೆ ನೀಡಲಾಗಿದೆ. ಹಾಗಾಗಿ ಶೀಘ್ರದಲ್ಲಿಯೇ ಕೇಂದ್ರ ಸರ್ಕಾರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ನಮ್ಮ ರಾಜ್ಯಕ್ಕೆ ಪ್ರತಿ ತಿಂಗಳು 20 ಸಾವಿರ ಮೆಟ್ರಿಕ್‌ ಟನ್‌ ಅಕ್ಕಿ ಬೇಕಾಗಬಹುದು. ನಾನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ಹಂತದಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು.

ಈ ಹಿಂದೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೇ ಇದ್ದಾಗ ಹಣ ಸಂದಾಯ ಮಾಡಿದ್ದೆವು. ಈ ನಡುವೆ ನಡೆಸಿದ ಸಮೀಕ್ಷೆಯಲ್ಲಿ ಜನರು ಹಣದ ಬದಲು ಬೇಳೆ, ಸಕ್ಕರೆ ಮತ್ತು ಎಣ್ಣೆಗೆ ಮನವಿ ಮಾಡಿದ್ದಾರೆ. ಜನರ ಬಯಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರಕ್ಕೆ ಅಕ್ಕಿಯ ಪ್ರಮಾಣದ ಬಗ್ಗೆ ಮನವಿ ಮಾಡುತ್ತೇವೆ ಎಂದು ಹೇಳಿದರು.

 

Tags: