ನವದೆಹಲಿ: ಸಿಎಂ ಸಿದ್ದರಾಮಯ್ಯರ ಜೊತೆ ಚರ್ಚಿಸಿ ಅಕ್ಕಿ ಪೂರೈಕೆಗೆ ಕೇಂದ್ರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಅಕ್ಕಿ ನೀಡಲು ನಿರ್ಧಾರ ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆಗೆ ಚರ್ಚೆ ನಡೆಸಿದ್ದು, ರಾಜ್ಯಕ್ಕೂ ಅಕ್ಕಿ ನೀಡಲು ಒಪ್ಪಿಗೆ ನೀಡಲಾಗಿದೆ. ಹಾಗಾಗಿ ಶೀಘ್ರದಲ್ಲಿಯೇ ಕೇಂದ್ರ ಸರ್ಕಾರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ನಮ್ಮ ರಾಜ್ಯಕ್ಕೆ ಪ್ರತಿ ತಿಂಗಳು 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು. ನಾನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ಹಂತದಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು.
ಈ ಹಿಂದೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೇ ಇದ್ದಾಗ ಹಣ ಸಂದಾಯ ಮಾಡಿದ್ದೆವು. ಈ ನಡುವೆ ನಡೆಸಿದ ಸಮೀಕ್ಷೆಯಲ್ಲಿ ಜನರು ಹಣದ ಬದಲು ಬೇಳೆ, ಸಕ್ಕರೆ ಮತ್ತು ಎಣ್ಣೆಗೆ ಮನವಿ ಮಾಡಿದ್ದಾರೆ. ಜನರ ಬಯಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರಕ್ಕೆ ಅಕ್ಕಿಯ ಪ್ರಮಾಣದ ಬಗ್ಗೆ ಮನವಿ ಮಾಡುತ್ತೇವೆ ಎಂದು ಹೇಳಿದರು.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…