ರಾಜ್ಯ

ದೇವೀರಮ್ಮನ ಜಾತ್ರೆಗೆ ಹೊಸ ನಿಯಮ — ರಾತ್ರಿ ಬೆಟ್ಟ ಹತ್ತಲು ನಿಷೇಧ, ಎರಡು ದಿನ ಭಕ್ತರಿಗೆ ಅವಕಾಶ!

ಚಿಕ್ಕಮಗಳೂರು: ಕಾಫಿನಾಡಿನ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ದರ್ಶನಕ್ಕೆ ತೆರಳುವ ಭಕ್ತರೇ ಗಮನಿಸಿ… ಈ ಬಾರಿಯ ಜಾತ್ರಾ ಮಹೋತ್ಸವಕ್ಕೆ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ರಾತ್ರಿ ವೇಳೆ ಬೆಟ್ಟ ಹತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಬಿಂಡಿಗ–ಮಲ್ಲೇನಹಳ್ಳಿ ಗ್ರಾಮದ ದೇವೀರಮ್ಮನ ಜಾತ್ರೆಗೆ ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲಾಡಳಿತ, ವಿವಿಧ ಇಲಾಖೆಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುತ್ತಿವೆ.

ಕಿರಿದಾದ, ದುರ್ಗಮ ಹಾದಿಯ ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವೀರಮ್ಮನ ದರ್ಶನಕ್ಕೆ ಪ್ರತಿವರ್ಷ ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುತ್ತಾರೆ. ವರ್ಷಕ್ಕೊಮ್ಮೆ ದೊರೆಯುವ ದೇವಿಯ ದರ್ಶನಕ್ಕಾಗಿ ದೂರದ ಊರುಗಳಿಂದಲೂ ಭಕ್ತರು ಇಲ್ಲಿಗೆ ಬರುತ್ತಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಈ ಬಾರಿ ಎರಡು ದಿನಗಳ ಕಾಲ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ. ಆದರೆ ರಾತ್ರಿ ವೇಳೆ ಬೆಟ್ಟ ಹತ್ತಲು ಅವಕಾಶ ಇರುವುದಿಲ್ಲ.

ದೇವೀರಮ್ಮನ ದರ್ಶನಕ್ಕೆ ತೆರಳುವ ಭಕ್ತರು ಜಿಲ್ಲಾಡಳಿತ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ನಿಗದಿಪಡಿಸುವ ಸಮಯ ಮತ್ತು ಸೂಚನೆಗಳನ್ನು ಗಮನಿಸಿ ಪ್ರಯಾಣ ಬೆಳೆಸಿ.

ಆಂದೋಲನ ಡೆಸ್ಕ್

Recent Posts

ಜೈಲಿನ ರಾಜಾತಿಥ್ಯ ವಿಡಿಯೋ ಪ್ರಕರಣದಲ್ಲಿ ಧನ್ವೀರ್‌ಗೆ ಸಂಕಷ್ಟ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾದ ವಿಡಿಯೋ ವೈರಲ್‌ ಪ್ರಕರಣದಲ್ಲಿ ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ…

4 mins ago

ಓದುಗರ ಪತ್ರ: ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಿ

ಕಟ್ಟಡ ನಿರ್ಮಾಣ ಕಾರ್ಮಿಕರು ದಿನ ನಿತ್ಯ ಕೂಲಿ ಕೆಲಸಕ್ಕಾಗಿ ೫೦ರಿಂದ ೮೦ ಕಿ.ಮೀ. ಪ್ರಯಾಣ ಮಾಡುತ್ತಾರೆ. ಬಹುತೇಕ ಕಾರ್ಮಿಕರ ಬಳಿ…

2 hours ago

ಓದುಗರ ಪತ್ರ: ಎಫ್‌ಡಿಎ ಮತ್ತು ಎಸ್‌ಡಿಎ ಪರೀಕ್ಷಾ ವೇಳಾಪಟ್ಟಿ ಬದಲಿಸಿ

ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ಒಟ್ಟಾರೆ ಐದು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಪರೀಕ್ಷೆ ಸಂಬಂಧ…

2 hours ago

ಓದುಗರ ಪತ್ರ: ಕಾಫಿ, ಟೀ ದರ ಹೆಚ್ಚಳ ಗ್ರಾಹಕರಿಗೆ ಹೊರೆಯಾಗದಿರಲಿ

ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇದರೊಂದಿಗೆ ಹಾಲಿನ ಬೆಲೆಯೂ ಹೆಚ್ಚಾಗಿರುವುದರಿಂದ ಹೋಟೆಲ್ ಮಾಲೀಕರು ಕಾಫಿ, ಟೀಗೆ…

2 hours ago

ಓದುಗರ ಪತ್ರ: ಆರೋಗ್ಯ ವಿಮೆ ಬಿಲ್ ಮಾಫಿಯಾ ತಡೆಯಿರಿ

ಇಂದಿನ ಆರೋಗ್ಯ ಕ್ಷೇತ್ರದಲ್ಲಿ ಚಿಕಿತ್ಸೆಗಾಗಿ ವಿಮಾ ಸೌಲಭ್ಯವಿದ್ದರೂ ರೋಗಿಗೆ ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಖಾಸಗಿ ಆಸ್ಪತ್ರೆಗಳು…

2 hours ago

ಸಪ್ತ ಭಾಷೆಗಳಲ್ಲಿ ಸಿಗಲಿದೆ ಮೈಸೂರು ಚಿತ್ರಣ!

ಕೇಶವ್ ಎಂ. ಮೈಸೂರು: ದಕ್ಷಿಣ ಭಾರತದಲ್ಲಿನ ಪ್ರವಾಸಿಗರ ನೆಚ್ಚಿನ ತಾಣ ಅರಮನೆ ನಗರಿ ಮೈಸೂರು. ಇದೀಗ ಮೈಸೂರು ಪ್ರವಾಸೋದ್ಯಮ ಇಲಾಖೆಯ…

2 hours ago