ರಾಜ್ಯ

ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್‌ ರೈಲು ಘೋಷಣೆ: ಸಂಸದ ತೇಜಸ್ವಿ ಸೂರ್ಯ ಮಾಹಿತಿ

ಬೆಂಗಳೂರು: ದೇಶದ ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಐಟಿಬಿಟಿ ರಾಜಧಾನಿ ಬೆಂಗಳೂರು ನಡುವೆ ಹೊಸ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿದೆ.

ಇದರಿಂದಾಗಿ ಎರಡು ನಗರಗಳ ನಡುವೆ ಸೂಪರ್ ಫಾಸ್ಟ್ ರೈಲು ಬೇಕು ಎಂಬ ದಶಕಗಳ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಅಸ್ತು ಎಂದಿದೆ.

ಈ ಬಗ್ಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಮುಂಬೈ ನಡುವೆ ಶೀಘ್ರದಲ್ಲೇ ಸೂಪರ್ ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡುತ್ತಿದ್ದಾರೆ. ಸದ್ಯ ಈ ಎರಡು ನಗರಗಳ ನಡುವೆ ಸೂಪರ್ ಫಾಸ್ಟ್ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತಿದ್ದು, ಪ್ರಯಾಣಿಕರ ಹಿತದೃಷ್ಟಿಯಿಂದ ರೈಲಿನ ಲೇನ್ ಸಾಮರ್ಥ್ಯವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : ಮೈಸೂರು ದಸರಾಗೆ ಆಗಮಿಸುವ ನಾಡ ಜನತೆಗೆ ರೈಲ್ವೆ ಇಲಾಖೆಯಿಂದ ಬಿಗ್ ಗಿಫ್ಟ್

ಕಳೆದ 30 ವರ್ಷಗಳಿಂದ, ನಮ್ಮ ಎರಡು ಮಹಾ ನಗರಗಳನ್ನು ಒಂದೇ ಒಂದು ಸೂಪರ್ ಫಾಸ್ಟ್ ರೈಲು ಸಂಪರ್ಕಿಸುತ್ತಿತ್ತು. ಅದು – ಉದ್ಯಾನ್ ಎಕ್ಸ್‌ಪ್ರೆಸ್. ಆ ರೈಲು ಕೂಡ ತಲುಪಲು 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಇದರಿಂದಾಗಿ ಅನಿವಾರ್ಯವಾಗಿ ಜನರು ಬಸ್ ಅಥವಾ ವಿಮಾನಗಳನ್ನು ಬಳಸಬೇಕಾಗಿತ್ತು. ಇದರಿಂದ ಪ್ರಯಾಣ ದುಬಾರಿ ಮತ್ತು ಅನಾನುಕೂಲಕರವಾಗಿತ್ತು ಎಂದು ಹೇಳಿದ್ದಾರೆ. ‌

ಹೆಚ್ಚಿನ ರೈಲು ಸೇವೆಗಳನ್ನು ಪ್ರಾರಂಭಿಸಲು ಎರಡೂ ನಗರಗಳ ಜನರಿಂದ ನಿರಂತರ ಬೇಡಿಕೆ ಇತ್ತು. ಕಳೆದ ನಾಲ್ಕು ವರ್ಷಗಳಲ್ಲಿ ನಾನು ಸಂಸತ್ತಿನಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆಗಳಲ್ಲಿ, ರೈಲ್ವೆ ಮಂಡಳಿ ಅಧ್ಯಕ್ಷರೊಂದಿಗೆ ಮತ್ತು ರೈಲ್ವೆ ಸಚಿವರೊಂದಿಗೆ ಈ ವಿಷಯವನ್ನು ಹಲವು ಬಾರಿ ಪ್ರಸ್ತಾಪಿಸಿದ್ದೆ. ಬೆಂಗಳೂರು ಮತ್ತು ಮುಂಬೈನಂತಹ ಪ್ರಮುಖ ಆರ್ಥಿಕ ಕೇಂದ್ರಗಳು ಬಹಳ ಹಿಂದಿನಿಂದಲೂ ಒಂದಕ್ಕಿಂತ ಹೆಚ್ಚು ನೇರ ಸೂಪರ್ ಫಾಸ್ಟ್ ರೈಲುಗಳನ್ನು ಹೊಂದಿಲ್ಲ ಎಂಬುದು ದಿಗ್ಭಮೆಗೊಳಿಸುವ ಸಂಗತಿ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ದೇಶಕ್ಕೆ ಹಲವು ಪ್ರಮುಖ ಭರವಸೆಗಳನ್ನು ಈಡೇರಿಸುತ್ತಿರುವಂತೆ, ನಮ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಮುಂಬೈ ರೈಲು ನಿಲ್ದಾಣಗಳಲ್ಲಿ ಲೇನ್ ಸಾಮಥ್ರ್ಯವನ್ನು ಹೆಚ್ಚಿಸುವ ಮೂಲಕ ಹೆಚ್ಚಿನ ಸೂಪರ್ ಫಾಸ್ಟ್ ರೈಲುಗಳನ್ನು ಸಾಧ್ಯವಾಗಿಸಿದ್ದಾರೆ. ಇದಕ್ಕಾಗಿ ಸಚಿವ ವಿ. ಸೋಮಣ್ಣ ಅವರ ಬೆಂಬಲಕ್ಕೂ ತೇಜಸ್ವಿ ಸೂರ್ಯ ಧನ್ಯವಾದ ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ, ಎರಡು ನಗರಗಳ ನಡುವಿನ ರೈಲು ಪ್ರಯಾಣ ಹೆಚ್ಚಾಗಲಿದ್ದು, ಲಕ್ಷಾಂತರ ಜನರಿಗೆ ಇದರಿಂದ ಪ್ರಯೋಜನವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

14 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

15 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

16 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

22 hours ago