dinesh gundurao
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 45 ಹೊಸ ತಾಲ್ಲೂಕುಗಳಿದ್ದು, ಸದ್ಯಕ್ಕೆ ಅಲ್ಲಿ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳ ಅಗತ್ಯತೆ, ಬೇಡಿಕೆಗಳನ್ನು ಪರಿಶೀಲನೆ ಮಾಡಿ ವರದಿ ನೀಡಲು ಸಮಿತಿ ರಚಿಸಲಾಗಿದೆ. ವೈಜ್ಞಾನಿಕವಾಗಿ ಸಮಿತಿ ವರದಿ ಆಧರಿಸಿ ಆಸ್ಪತ್ರೆಗಳನ್ನು ಮಂಜೂರು ಮಾಡಲಾಗುತ್ತದೆ. ಇದಕ್ಕಾಗಿ ೮೫೦ ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದರು.
ಇದನ್ನು ಓದಿ: ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ
ಶಿರಹಟ್ಟಿಯಲ್ಲಿ ೧.೫೩ ಲಕ್ಷ ಜನಸಂಖ್ಯೆಯಿದ್ದು, ಈಗಾಗಲೇ ಒಂದು ಸಮುದಾಯ ಆರೋಗ್ಯ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಮತ್ತೊಂದು ಸಿಎಚ್‌ಸಿ ಮಂಜುರಾತಿ ಮಾಡಲು ಮಾರ್ಗಸೂಚಿ ಪ್ರಕಾರ ಅವಕಾಶವಿಲ್ಲ. ಸಮಿತಿ ವರದಿ ಆಧರಿಸಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಸ್ಪತ್ರೆಗಳ ಕೊರತೆ ನೀಗಿಸಲಾಗುವುದು ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಡಾ.ಚಂದ್ರ ಲಮಾಣಿ ಅವರು, ಶಿರಹಟ್ಟಿ ತಾಲ್ಲೂಕು ಕೇಂದ್ರವಾಗಿದ್ದು, ಅಲ್ಲಿ ತಾಲ್ಲೂಕು ಆಸ್ಪತ್ರೆಯಾಗಬೇಕು ಹಾಗೂ ಹೊಸ ಆರೋಗ್ಯ ಸಮುದಾಯ ಕೇಂದ್ರ ನಿರ್ಮಿಸಬೇಕೆಂದು ಒತ್ತಾಯಿಸಿದರು.
ಶಾಸಕ ಐಹೊಳೆ ಮಹಾಲಿಂಗಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವರು, ರಾಯಭಾಗದಲ್ಲಿ ೧೦೦ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಿದ್ದು, ಅಲ್ಲಿ ಕೊರತೆಯಿರುವ ತಜ್ಞವೈದ್ಯರನ್ನು ಜನವರಿ ತಿಂಗಳೊಳಗೆ ಒದಗಿಸಲಾಗುವುದು, ನಂತರ ತಾಯಿ, ಮಕ್ಕಳ ಆಸ್ಪತ್ರೆಯ ಬಗ್ಗೆ ಪರಿಶೀಲಿಸೋಣ ಎಂದು ಹೇಳಿದರು.
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…