ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈಗಾಗಲೇ ಪೊಲೀಸರು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಹೊಸ ವರ್ಷಾಚರಣೆಯ ಸಂಬಂಧ ಮಂಡ್ಯ ಜಿಲ್ಲಾ ಪೊಲೀಸರು ಕೆಆರ್‌ಎಸ್ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಜನವರಿ.1 ರ ರಾತ್ರಿ 8 ಗಂಟೆಯ ತನಕ ಈ ಆದೇಶ ಜಾರಿಯಲ್ಲಿರುತ್ತದೆ.
ಇನ್ನು ಬಲಮುರಿ, ಎಡಮುರಿ ವೇಣುಗೋಪಾಲಸ್ವಾಮಿ ದೇವಾಲಯ, ಚಿಕ್ಕಯಾರಹಳ್ಳಿ ಬಳಿಯ ಕೊಳಬಾವಿ ಪ್ರವೇಶ, ಕಾವೇರಿ ಹಿನ್ನೀರು ಸೇರಿದಂತೆ ನದಿ ಪಾತ್ರದ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಇನ್ನು ನಂದಿಗಿರಿಧಾಮ, ಚಿಕ್ಕಮಗಳೂರಿನ ಪ್ರವಾಸಿ ತಾಣಗಳು, ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ಇಡಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ.




