ರಾಜ್ಯ

ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯದ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈಗಾಗಲೇ ಪೊಲೀಸರು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹೊಸ ವರ್ಷಾಚರಣೆಯ ಸಂಬಂಧ ಮಂಡ್ಯ ಜಿಲ್ಲಾ ಪೊಲೀಸರು ಕೆಆರ್‌ಎಸ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಜನವರಿ.1 ರ ರಾತ್ರಿ 8 ಗಂಟೆಯ ತನಕ ಈ ಆದೇಶ ಜಾರಿಯಲ್ಲಿರುತ್ತದೆ.

ಇನ್ನು ಬಲಮುರಿ, ಎಡಮುರಿ ವೇಣುಗೋಪಾಲಸ್ವಾಮಿ ದೇವಾಲಯ, ಚಿಕ್ಕಯಾರಹಳ್ಳಿ ಬಳಿಯ ಕೊಳಬಾವಿ ಪ್ರವೇಶ, ಕಾವೇರಿ ಹಿನ್ನೀರು ಸೇರಿದಂತೆ ನದಿ ಪಾತ್ರದ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಇನ್ನು ನಂದಿಗಿರಿಧಾಮ, ಚಿಕ್ಕಮಗಳೂರಿನ ಪ್ರವಾಸಿ ತಾಣಗಳು, ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳನ್ನು ಬಂದ್‌ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ಇಡಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago