ರಾಜ್ಯ

ಹೊಸ ವರ್ಷದ ಸಂಭ್ರಮಾಚರಣೆ ಮೇಲೆ ಪೊಲೀಸರ ಹದ್ದಿನ ಕಣ್ಣು

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಅವರು, ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಆಯಾ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇಂದಿರಾನಗರ, ಕೋರಮಂಗಲ, ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ,ಯಲ್ಲಿ ಅತೀ ಹೆಚ್ಚು ಜನರು ಸೇರಲಿದ್ದು, ಅಲ್ಲಿನ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ.

ಇದೆಲ್ಲದರ ಜೊತೆಗೆ ಡ್ರೋನ್‌ ಕ್ಯಾಮರಾ ನಿಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಿಸಿ ಕ್ಯಾಮರಾಗಳನ್ನು ಸಹ ಅಳವಡಿಕೆ ಮಾಡಲಾಗುತ್ತದೆ.

ಇನ್ನು ಬಾರ್‌ ಅಂಡ್‌ ರೆಸ್ಟೋರೆಂಟ್‌ ಮಾಲೀಕರ ಜೊತೆಯೂ ಸಭೆ ನಡೆಸಲಾಗಿದ್ದು, ಮಧ್ಯರಾತ್ರಿ ಒಂದು ಗಂಟೆ ತನಕ ಹೊಸ ವರ್ಷ ಆಚರಣೆಗೆ ಸಮಯ ನಿಗದಿ ಮಾಡಲಾಗಿದೆ.

ಹೊಸ ವರ್ಷದ ವಿಶ್‌ ಮಾಡುವ ನೆಪದಲ್ಲಿ ಕೂಗಾಟ, ಪೀಪಿಗಳನ್ನು ಊದುವುದು, ವಿಚಿತ್ರ ರೀತಿಯ ಮಾಸ್ಕ್‌ ಹಾಕಿಕೊಂಡು ತೊಂದರೆ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನು ಬೆಂಗಳೂರಿನ ಹೊರವಲಯದ ರೇವ್‌ ಪಾರ್ಟಿಗಳ ಮೇಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಅನಧಿಕೃತವಾಗಿ ಪಾರ್ಟಿ ಆಯೋಜನೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

9 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

12 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

12 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

16 hours ago