ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಇರುವುದರಿಂದ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆಂಬುಲೆನ್ಸ್ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆ ಸೇವೆ ಒದಗಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ತುರ್ತು ಕರ್ತವ್ಯಕ್ಕಾಗಿ ಜಿಲ್ಲಾ ಮಟ್ಟದ ಎಲ್ಲಾ ಆಸ್ಪತ್ರೆಗಳಲ್ಲಿ ಪುರುಷರು, ಮಹಿಳೆಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಮಹಿಳೆಯರಿಗಾಗಿ ಮಹಿಳಾ ಸಿಬ್ಬಂದಿ ನಿಯೋಜಿಸಬೇಕು. ಆಂಬುಲೆನ್ಸ್ ಅನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿ ಇರಿಸಬೇಕು. ಔಷಧಿಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕೆಂದು ಆರೋಗ್ಯ ಇಲಾಖೆಯಿಂದ ನಿರ್ದೇಶನ ನೀಡಲಾಗಿದೆ.
ಇನ್ನು ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜ್ಯದೆಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ 20,000 ಪೊಲೀಸರನ್ನು ನಿಯೋಜಿಸಲಾಗಿದ್ದು, ಜಿಲ್ಲೆಗಳಲ್ಲಿ ತಲಾ 1200 ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…