ರಾಜ್ಯ

ಹೊಸ ವರ್ಷಾಚರಣೆ ಅಂಗವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಬೆಂಗಳೂರು:‌ ಈ ಬಾರಿಯ ಹೊಸ ವರ್ಷಾಚರಣೆಗೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಎಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಹಾಗೇಯೇ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನತೆ ಹೊಸ ವರ್ಷ ಬರಮಾಡಿಕೊಳ್ಳುವ ಖುಷಿಯಲ್ಲಿದ್ದಾರೆ. ಈ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಆಗಬಾರದು ಎನ್ನುವ ಉದ್ದೇಶದಿಂದ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಂಡಿದ್ದೇವೆ ಎಂದು ಹೇಳಿದರು.

ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನ ಎಂ.ಜಿ.ರೋಡ್‌, ಬ್ರಿಗೇಡ್‌ ರೋಡ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಯಲಿದ್ದು, ಹೆಣ್ಣು ಮಕ್ಕಳು, ಮಹಿಳೆಯರ ಭದ್ರತೆಯ ದೃಷ್ಟಿಯಿಂದ ಈ ಬಾರಿ 7500ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆದರು ಕೂಡಲೇ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.

ಈ ಮೂಲಕ ಈ ಬಾರಿ ಹೊಸ ವರ್ಷಾಚರಣೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

26 mins ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

47 mins ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

1 hour ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

1 hour ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

2 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

2 hours ago