ರಾಜ್ಯ

ಹೊಸ ವರ್ಷಾಚರಣೆ ಸಂಭ್ರಮ : ಅಹಿತಕರ ಘಟನೆ ತಡೆಗೆ ಸಿಎಂ ಸೂಚನೆ

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಸಭೆಯಲ್ಲಿ ಮುಖ್ಯಮಂತ್ರಿ ನೀಡಿದ ಸೂಚನೆ ಇಂತಿವೆ….

  • ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.
  • ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು.
  • ಮಹಾತ್ಮಾ ಗಾಂಧಿ ರಸ್ತೆ, ಬ್ರಿಗೇಡ್‌ ರೋಡ್‌, ಚರ್ಚ್‌ ಸ್ಟೀಟ್‌, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು.
  • ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು.
  • ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್‌ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್‌, 55 ಅಂಬುಲೆನ್ಸ್ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್‌ ಆಂಡ್‌ ಡ್ರೈವ್‌ ಪ್ರಕರಣಗಳನ್ನು ದಾಖಲಿಸಲಾಗಿದೆ.
  • ನಗರದಲ್ಲಿರುವ 50 ಫ್ಲೈ ಓವರ್ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು.
  • ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್‌ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು; ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಅವರು ಎಚ್ಚರಿಕೆ ನೀಡಿದರು.

ಗೃಹ ಸಚಿವ ಡಾ. ಜಿ ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ.ಎಂ.ಎ.ಸಲೀಂ, ಜಿ.ಬಿ.ಎ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

4 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

4 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

4 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

5 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

5 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

6 hours ago