ರಾಜ್ಯ

ಹೊಸ ವರ್ಷ ಸಂಭ್ರಮ | ಮಾರ್ಗಸೂಚಿ ಪ್ರಕಟ ; ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು : 2027ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ.

ಗೋವಾದ ನೈಟ್‍ಕ್ಲಬ್ ಅಗ್ನಿ ದುರಂತದಲ್ಲಿ 20ಕ್ಕೂ ಹೆಚ್ಚು ಜನ ಮೃತಪಟ್ಟ ಘಟನೆಯ ನಂತರ ಇದೀಗ ಸುರಕ್ಷತೆಯ ದೃಷ್ಠಿಯಿಂದ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ ಬೆಂಗಳೂರಿನ ಪಬ್, ಬಾರ್, ಕ್ಲಬ್‍ಗಳಿಗೆ 19 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿವೆ.

ಧ್ವನಿವರ್ಧಕ ಸೌಂಡ್ ಎಷ್ಟಿರಬೇಕು? ಏನೆಲ್ಲ ಮುನ್ನೆಚ್ಚರಿಕೆ ಕ್ರಮ ತಗೆದುಕೊಳ್ಳಬೇಕು? ಎಲ್ ಡಿ ಸ್ಕ್ರೀನ್ ಹಾಗೂ ಸುರಕ್ಷಿತಾ ಮಾನದಂಡಗಳ ಕುರಿತು ಸಲಹೆ ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಕಾರ್ಯಕ್ರಮ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.

ಇದನ್ನೂ ಓದಿ:-ಬೌದ್ಧ ಬಿಕ್ಕುಗಳಿಗೆ ಶೀಘ್ರದಲ್ಲೇ ಮಾಸಿಕ ಸಂಭಾವನೆ : ಸರ್ಕಾರ ಘೋಷಣೆ

ಗೋವಾ ಪಬ್ ದುರಂತದ ನಂತರ ಮತ್ತಷ್ಟು ಬಿಗಿ ಕ್ರಮಗಳನ್ನು ಜಾರಿಗೆ ತರಲು ಖಾಕಿ ಪಡೆ ಮುಂದಾಗಿದೆ.
ವಿಶೇಷ ಅತಿಥಿಗಳ ಮಾಹಿತಿ
ಸೆಲೆಬ್ರಿಟಿಗಳು, ಡಿಜೆಗಳು, ಅಥವಾ ನಟ-ನಟಿಯರನ್ನು ಆಹ್ವಾನಿಸಿದ್ದಲ್ಲಿ ಅವರ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ನೀಡಬೇಕು.
ಇತರೆ ನಿರ್ಬಂಧಗಳು
ಲೈಸೆನ್ಸ್ ಇಲ್ಲದ ಔಟ್ ಡೋರ್ ಸ್ಥಳಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶವಿಲ್ಲ. ಹೋಟೆಲ್‍ಗಳ ರೂಮ್‍ಗಳಲ್ಲಿ ಗುಂಪು ಸೇರಿ ನಿಯಮಬಾಹಿರವಾಗಿ ಖಾಸಗಿ ಪಾರ್ಟಿ ನಡೆಸಲು ಅವಕಾಶ ನೀಡಬಾರದು. ಯಾವುದೇ ಅಹಿತಕರ ಘಟನೆ ನಡೆದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು.

ಮಾರ್ಗಸೂಚಿ ಇಂತಿವೆ….
1. ಕಾರ್ಯಕ್ರಮಗಳಿಗೆ ಸಂಬಂಧ ಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮ ಪಾಲಿಸಬೇಕು.
2. ಹೊಸ ವರ್ಷಾಚರಣೆ ಸಂಬಂಧ ನಿಗಧಿತ ಸಮಯವನ್ನ ಪಾಲಿಸಬೇಕು.
3. ಕಡ್ಡಾಯವಾಗಿ ಧ್ವನಿವರ್ಧಕ ಪರವಾನಗಿ ಪಡೆದುಕೊಂಡ ನಂತರ ನಿಗದಿತ ಶಬ್ಧ ಮಿತಿ ಇರಬೇಕು.
4. ಸ್ಥಳಾವಕಾಶಕ್ಕೆ ತಕ್ಕಂತೆ ಟಿಕೆಟ್/ಪಾಸ್‍ಗಳನ್ನು ವಿತರಿಸಬೇಕು. ಹಾಗೂ ನೆಲಮಹಡಿ, ಪಾಕಿರ್ಂಗ್ ಸ್ಥಳಗಳು, ಟೆರೆಸ್‍ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
5. ಕಾರ್ಯಕ್ರಮದ ಸ್ಥಳಗಳಲ್ಲಿ ಸ್ಕ್ರೀನ್‍ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸ್ಕ್ರೀನಿಂಗ್ ಮಾಡಬಾರದು.
6. ಕಾರ್ಯಕ್ರಮಕ್ಕೆ ಬರುವವರ ತಪಾಸಣೆ ನಡೆಸಿ ಸಂಶಯಾಸ್ಪದ ವಸ್ತು/ವ್ಯಕ್ತಿಗಳು ಕಂಡು ಬಂದಲ್ಲಿ ಪೆÇಲೀಸರಿಗೆ ಮಾಹಿತಿ ನೀಡುಬೇಕು.
7. ಅಗ್ನಿ ನಂದಿಸುವ ವಸ್ತುಗಳನ್ನ ಅಳವಡಿಸಿಕೊಳ್ಳಬೇಕು, ನಿರ್ಗಮನ ದ್ವಾರಗಳು ದೊಡ್ಡದಾಗಿರಬೇಕು.
8. ಕಾರ್ಯಕ್ರಮದ ಪ್ರತಿ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ 30 ದಿನಗಳವರೆಗೆ ಸ್ಟೋರೆಜ್ ಮಾಡಬೇಕು.
9. ಮಾದಕ ವಸ್ತುಗಳ ಬಳಕೆ ಕಂಡು ಬಂದರೆ ತಕ್ಷಣವೇ ಸ್ಥಳೀಯ ಪೆÇಲೀಸರಿಗೆ ಮಾಹಿತಿ ನೀಡಬೇಕು. ಪೆÇಲೀಸರೇ ದಾಳಿ ನಡೆಸಿದಾಗ ಸಿಕ್ಕಿಬಿದ್ದರೆ ಕಾರ್ಯಕ್ರಮದ ಕಟ್ಟಡದ ಮಾಲೀಕರು/ಮ್ಯಾನೇಜರ್ ವಿರುದ್ಧ ಕೇಸ್.
10. ಸಾರ್ವಜನಿಕರ ವಾಹನಗಳಿಗೆ ತಮ್ಮ ಪಾಕಿರ್ಂಗ್ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಿಸಬೇಕು.
11. ಹೊಸ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಸೆಲೆಬ್ರಿಟಿಗಳು, ಡಿಜೆಗಳು, ನಟ ನಟಿಯರನ್ನ ಆಹ್ವಾನಿಸಿದ್ದಲ್ಲಿ ಅವರ ಮಾಹಿತಿಯನ್ನು ಸ್ಥಳೀಯ ಪೆÇಲೀಸ್ ಠಾಣೆಗೆ ನೀಡಬೇಕು.
12. ಪಾಕಿರ್ಂಗ್ ಸ್ಥಳ ಮತ್ತು ಮಹಿಳೆಯರಿರುವ ಸ್ಥಳಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಖಾಸಗಿ ಭದ್ರತಾ ಸಿಬ್ಬಂದಿ ನೇಮಿಸಬೇಕು.
13. ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಬೌನ್ಸರ್‍ಗಳನ್ನು ನಿಯೋಜಿಸಿ ಕೊಳ್ಳುವ ಏಜೆನ್ಸಿಗಳು ‘PSಂಖಂ’ ದಲ್ಲಿ ನೊಂದಣಿ ಮಾಡಬೇಕು.
14. ಪಾರ್ಟಿ ವೇಳೆ ಇರುವ ಕೆಲಸಗಾರರ ಮಾಹಿತಿಯನ್ನ ಧೃಢೀಕೃತ ಐ.ಡಿ ಕಾರ್ಡ್‍ನೊಂದಿಗೆ ನೀಡಬೇಕು.
15. ಲೈಸೆನ್ಸ್ ಇಲ್ಲದ ಔಟ್ ಡೋರ್ ಸ್ಥಳಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶವಿಲ್ಲ.
16. ಹೋಟೆಲ್‍ಗಳ ರೂಮ್‍ಗಳಲ್ಲಿ ಗುಂಪು ಸೇರಿ ನಿಯಮ ಬಾಹಿರವಾಗಿ ಖಾಸಗಿ ಪಾರ್ಟಿ ನಡೆಸಲು ಅವಕಾಶ ನೀಡಬಾರದು.
17. ಕಾರ್ಯಕ್ರಮದ ಸ್ಥಳದಲ್ಲಿ ಗಲಾಟೆ ನಡೆದಲ್ಲಿ ಕೂಡಲೇ ಪೆÇಲೀಸರಿಗೆ ಮಾಹಿತಿ ನೀಡಬೇಕು.
18. ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನ ಸಂಪೂರ್ಣವಾಗಿ ನಿಷೇಧಿಸಿದೆ.
19. ಯಾವುದೇ ಅಹಿತಕರವಾದ ಘಟನೆಗಳು ನಡೆಯದಂತೆ ಕ್ರಮಗಳನ್ನ ಕೈಗೊಳ್ಳಬೇಕು.

ಆಂದೋಲನ ಡೆಸ್ಕ್

Recent Posts

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

5 mins ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

17 mins ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

10 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

13 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

13 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

13 hours ago