Mysore
32
clear sky

Social Media

ಗುರುವಾರ, 13 ಮಾರ್ಚ್ 2025
Light
Dark

ಕರ್ನಾಟಕದಲ್ಲಿ ನಿಲ್ಲದ ವರುಣಾರ್ಭಟ: ಇನ್ನೆರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಅದರಲ್ಲೂ ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಇನ್ನೆರಡು ದಿನ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರೀ ಮಳೆ ಮುನ್ಸೂಚನೆ ಇರುವುದರಿಂದ ನದಿ, ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಇನ್ನು ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್‌ ಹಾಗೂ ಐಟಿಐ ಕಾಲೇಜಿಗೆ ಎಂದಿನಂತೆ ತರಗತಿ ನಡೆಯಲಿದೆ. ಇನ್ನು ಕೊಡಗಿನಲ್ಲೂ ಇನ್ನೆರಡು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಜನಜೀವನ ಅಸ್ತವ್ಯಸ್ತವಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಮಳೆಯ ಪ್ರಮಾಣ ನೋಡಿಕೊಂಡು ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗೆ ನೀಡಿದ್ದು, ಮಳೆ ಜಾಸ್ತಿಯಾದರಷ್ಟೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

Tags: